ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
Sri Rama Sena activists who went out to distribute saffron shawls against hijab are detained by the
ಬೆಳಗಾವಿ : ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು ಎಂದು ರಾಜ್ಯ ಸರಕಾರದ ನಿರ್ಧಾಕ್ಕೆ ಕೆಂಡವಾಗಿರುವ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗಾವಿಯ ಶಾಲಾಕಾಲೇಜುಗಳ ವಿಧ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಹೊರಟಾಗ ಪೊಲೀಸರು ವಶಕ್ಕೆ ಪಡೆದ ಘಟನೆ ಸಾಹಿತ್ಯ ಭವನದ ಬಳಿ ನಡೆಯಿತು.
11 ಗಂಟೆ ಸುಮಾರರಿಗೆ ಕನ್ನಡ ಸಾಹಿತ್ಯ ಭವನ ಬಳಿ ಜಮಾವಣೆಗೊಂಡ ಶ್ರೀರಾಮಸೇನೆ ಕಾರ್ಯಕರ್ತರು ರಾಜ್ಯ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಾಲೆಗಳಲ್ಲಿ ಹಿಜಾಬ್ ಹಾಕಬಹುದು ಎನ್ನುವ ಹೇಳಿಕೆಯನ್ನು ಖಂಡಿಸಿ ಬೆಳಗಾವಿಯ ಶಾಲಾಕಾಲೇಜುಗಳಿಗೆ ಕೇಸರಿ ಶಾಲು ವಿರತಣೆಗೆ ಮುಂದಾಗಿದ್ದರು.
ಇದೇ ವೇಳೆ ಜಿಲ್ಲಾ ಶ್ರೀರಾಮಸೇನೆ ಅಧ್ಯಕ್ಷ ರವಿಕುಮಾರ ಕೋಕಿತಕರ್ ಮಾತನಾಡಿ, ಮತಬ್ಯಾಂಕ್ ಗಾಗಿ ಕಾಂಗ್ರೆಸ್ ಸರಕಾರ ಹಿಜಾಬ್ ಹಾಕಬಹು ಎಂದು ಹೇಳುವ ಮೂಲಕ ಮತಭೇದ ಮಾಡಲು ಹೊರಟಿದೆ. ಪ್ರತಿ ಶಾಲೆಗಳ ವಿದ್ಯಾರ್ಥಿ ಸಮವಸ್ತ್ರ ಕಡ್ಡಾಯ ಇರುತ್ತದೆ. ಆದರೆ ಸರಕಾರ ಒಂದು ಸಮುದಾಯವನ್ನು ಎತ್ತಿಕಟ್ಟುವ ಹಾಗೂ ಮುಸ್ಲಿಂ ರನ್ನು ಎತ್ತಿ ಹಿಡಿದು ಹಿಂದುಗಳನ್ನು ಕೆಳಗೆ ತುಳಿಯುವ ಕಾರ್ಯ ವನ್ನು ಸರಕಾರ ಮಾಡುತ್ತಿದೆ ಎಂದು ದೂರಿದರು.
ಬಳಿಕ ಎಸಿಪಿ ಸಂತೋಷ ಸತ್ಯನಾಯಿಕ ಅವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ಈ ಕಾರ್ಯ ಕೈಬಿಡುವಂತೆ ಮನವೊಲಿಸುವ ಕಾರ್ಯ ಮಾಡಿದರು. ಆದರೆ ಶ್ರೀರಾಮಸೇನೆ ಕಾರ್ಯಕರ್ತರು ನಕಾರ ವ್ಯಕ್ತಪಡಿಸಿದರು. ಬಳಿಕ ಎಲ್ಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 