ಸೋಮೇಶ್ವರ ದೇವಸ್ಥಾನ ಹಿಂಭಾಗದ ಮಾಂಸದಂಗಡಿಗಳ ತೆರವಿಗೆ ಶ್ರೀರಾಮ ಸೇನೆ ಆಗ್ರಹ
Sri Rama Sena demands removal of meat shops behind Someshwara Temple
ಲೋಕದರ್ಶನ ವರದಿ
ಲಕ್ಷ್ಮೀಶ್ವರ 29: "ಪಟ್ಟಣದ ಹಿಂದೂ ನಾಗರಿಕರು ಹಾಗೂ ಭಕ್ತಾದಿಗಳು ಪುರಸಭೆಯ ಮುಖ್ಯ ಅಧಿಕಾರಿ ಪರಶುರಾಮ ಗುಡದಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ್ದಾರೆ ಲಕ್ಷ್ಮೀಶ್ವರ ನಗರ 12ನೇ ಶತಮಾನದ ಐತಿಹಾಸಿಕ ಪುಲಗೆರೆಯ ಶ್ರೀ ಸೋಮೇಶ್ವರ ದೇವಸ್ಥಾನವು ನಮ್ಮ ಊರಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಹೆಮ್ಮೆಯ ಸಂಕೇತವಾಗಿದೆ. ಆದರೆ ದೇವಸ್ಥಾನದ ಹಿಂಭಾಗದಲ್ಲಿ ಹಲವು ವರ್ಷಗಳಿಂದ ಮಾಂಸ ಮಾರಾಟ ಅಂಗಡಿಗಳು ಹಾಗೂ ಅಕ್ರಮ ಕಸಾಯಿ ಖಾನೆಗಳು ನಡೆಯುತ್ತಿದ್ದು, ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ. ಅಲ್ಲದೆ ಪರಿಸರ ಮಾಲಿನ್ಯ, ದುರ್ವಾಸನೆ ಮತ್ತು ಅಸ್ವಚ್ಛತೆ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಕಳೆದ ಹಲವು ವರ್ಷಗಳಿಂದ ನಮ್ಮ ಊರಿನ ಹಿರಿಯರು ಹಾಗೂ ಸಾರ್ವಜನಿಕರು ಹಾಗೂ ಹಲವಾರು ಸಂಘಟನೆಗಳು ಅನೇಕ ಬಾರಿ ಪುರಸಭೆಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳಲಾಗಿಲ್ಲ. ಕೆಲವರು ಪುರಸಭೆಯ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಸಾಯಿ ಖಾನೆಗಳನ್ನು ನಡೆಸುತ್ತಿದ್ದರೂ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಆದ್ದರಿಂದ ನಮ್ಮ ವಿನಂತಿಗಳು ಈ ಕೆಳಗಿನಂತಿವೆ:
01. ದೇವಸ್ಥಾನದ ಹಿಂಭಾಗದಲ್ಲಿರುವ ಎಲ್ಲಾ ಮಾಂಸ ಮಾರಾಟ ಅಂಗಡಿಗಳನ್ನು ತಕ್ಷಣ ಊರ ಹೊರಭಾಗಕ್ಕೆ ಸ್ಥಳಾಂತರಿಸಬೇಕು.
02. ಪರವಾನಿಗೆ ಇಲ್ಲದೆ ನಡೆಯುತ್ತಿರುವ ಅಕ್ರಮ ಕಸಾಯಿ ಖಾನೆಗಳನ್ನು ತಕ್ಷಣ ಬಂದ್ ಮಾಡಬೇಕು.
03. ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು.
04. ಅಕ್ರಮ ಕಟ್ಟಡಗಳು ಹಾಗೂ ನಿಯಮ ಉಲ್ಲಂಘನೆ ಮಾಡಿರುವ ಸ್ಥಳಗಳನ್ನು ತೆರವುಗೊಳಿಸಬೇಕು.
05. ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ ಮತ್ತು ಪವಿತ್ರತೆಯನ್ನು ಕಾಪಾಡುವ ಕ್ರಮ ಕೈಗೊಳ್ಳಬೇಕು.ನಮ್ಮ ಈ ಮನವಿಗೆ ಪುರಸಭೆಯವರು ಒಂದು ತಿಂಗಳ ಒಳಗಾಗಿ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಇಲ್ಲವಾದಲ್ಲಿ ಎಲ್ಲ ಹಿಂದೂ ನಾಗರಿಕರು ಮತ್ತು ವಿವಿಧ ಸಂಘಟನೆಗಳು ಮತ್ತು ಹಿಂದೂ ಸಂಘಟನೆಗಳು ಹಾಗೂ ಭಕ್ತಾದಿಗಳು ಸೇರಿ ಕಾನೂನುಬದ ಹಾಗೂ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ. ಆದ್ದರಿಂದ ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು ಈ ಸಮಯದಲ್ಲಿ ಹಿಂದೂ ಸಂಘಟನೆಯ ಶ್ರೀರಾಮ ಸೇನೆ ಸಂಘಟನೆ ಸನಾತನ ಹಿಂದೂ ಧರ್ಮದ ಮುಖಂಡರು ಹಿರಿಯರು ಯುವಕರು ಇದ್ದರು.
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು 