ಬಳ್ಳಾರಿ

ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಶ್ರೀರಾಮುಲು ಸೂಚನೆ

ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಶ್ರೀರಾಮುಲು  ಸೂಚನೆ


          ಬಳ್ಳಾರಿ, ನ. 13: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮರ​‍್ಕ ಬಸ್ ಸೌಲಭ್ಯ ಇಲ್ಲದೆ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ ದಯವಿಟ್ಟು ನಮಗೆ  ಬಸ್ ಸೌಲಭ್ಯವನ್ನು ಕಲ್ಪಿಸಿ ಕೊಡಿ ಎಂದು ಮಾಜಿ ಸಚಿವ ಶ್ರೀರಾಮುಲು ಅವರಿಗೆ ವಿದ್ಯಾರ್ಥಿಗಳು ಮನವಿ ಮಾಡಿದರು.  

          ಇಂದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶ್ರೀರಾಮುಲು ಅವರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ಸಮಸ್ಯೆಯನ್ನು ತೋಡಿಕೊಂಡಾಗ ವಿದ್ಯಾರ್ಥಿಗಳ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶ್ರೀರಾಮುಲು ಅವರು, ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೂಡಲೇ ಅಗತ್ಯ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.  

               ಜಾಹೀರಾತಿಗಷ್ಟೇ ಸೀಮಿತವಾದ ಸರ್ಕಾರವೇ?  

ರಾಜ್ಯದಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದ್ದೇವೆ ಎಂದು ಪ್ರಚಾರ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗಳತ್ತ ಗಮನಹರಿಸಬೇಕು. ಕೇವಲ ಜಾಹೀರಾತು ಮತ್ತು ಪ್ರಚಾರಕ್ಕೆ ಸೀಮಿತವಾಗದೆ,

              ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಪ್ರತಿದಿನ ಅನುಭವಿಸುತ್ತಿರುವ ಸಂಕಷ್ಟವನ್ನು ಕಣ್ಣಾರೆ ನೋಡಬೇಕು ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಇದು ಕೇವಲ ಬಳ್ಳಾರಿ ಗ್ರಾಮಾಂತರ ಕ್ಷೇತ್ರಕ್ಕೆ ಸೀಮಿತವಾದ ಸಮಸ್ಯೆಯಲ್ಲ. ರಾಜ್ಯದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ​‍್ಕ ಸಾರಿಗೆ ವ್ಯವಸ್ಥೆ ಇಲ್ಲದೆ ಶಿಕ್ಷಣ ಪಡೆಯಲು ತೊಂದರೆಯಾಗುತ್ತಿದೆ.

             ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ , ಗ್ರಾಮೀಣ ಭಾಗದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದರು. 


ಸುದ್ದಿ ಓದಿ