ಬಳ್ಳಾರಿ

ಬಳ್ಳಾರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ“ಮೂರು ವರ್ಷದ ಸಾಧನೆ ಎಂದರೆ ನೂರು ಸುಳ್ಳಿನ ಸಮಾವೇಶ” ಆರೋಪ

ಬಳ್ಳಾರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ“ಮೂರು ವರ್ಷದ ಸಾಧನೆ ಎಂದರೆ ನೂರು ಸುಳ್ಳಿನ ಸಮಾವೇಶ” ಆರೋಪ
Sriramulu lashes out at state government in Bellary, alleging "three years of achievement is a conve

ಬಳ್ಳಾರಿ 19: ನಗರದಲ್ಲಿ ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ ನಾಯಕ ಬಿ. ಶ್ರೀರಾಮುಲು, “ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಸರ್ಕಾರದ ಸಾಧನೆ. ಅದನ್ನೇ ಈಗ ಸಮಾವೇಶದ ಮೂಲಕ ಜನರಿಗೆ ತೋರಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಸಿದ್ದರಾಮಯ್ಯ ಸುಳ್ಳಿನ ಮಾಲೀಕರಾದರೆ, ಡಿ.ಕೆ. ಶಿವಕುಮಾರ್ ಆ ಸುಳ್ಳಿನ ಸಾಕ್ಷಿದಾರರು.

ಸುಳ್ಳಿನ ಅಡಿಪಾಯದ ಮೇಲೆಯೇ ಈ ಸರ್ಕಾರ ನಡೆಯುತ್ತಿದೆ” ಎಂದು ದೂರಿದರು. ರಾಜ್ಯದ ರೈತರ ಪರಿಸ್ಥಿತಿ ಹದಗೆಟ್ಟಿದ್ದು, ರೈತರಿಗೆ ಸಮರ​‍್ಕ ನೆರವು ಸಿಗುತ್ತಿಲ್ಲ ಎಂದು ಆರೋಪಿಸಿದ ಅವರು, ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನ ಬಾಕಿಯಾಗಿದೆ ಎಂದು ಹೇಳಿದರು. “ಬೀಜ ಮತ್ತು ಕೃಷಿ ವೆಚ್ಚಗಳು ಏರಿಕೆಯಾಗಿವೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದು ಆತ್ಮಹತ್ಯೆಗಳ ಪ್ರಮಾಣ ಹೆಚ್ಚುತ್ತಿದೆ. ರೈತರ ಬದುಕು ಉಳಿಸುವ ಬದಲು ಸರ್ಕಾರ ರೈತರ ಆತ್ಮಹತ್ಯೆ ಭಾಗ್ಯ ನೀಡುವ ಕೆಲಸ ಮಾಡುತ್ತಿದೆ” ಎಂದು ಕಿಡಿಕಾರಿದರು.ರೈತರ ಸಾವಿನ ನಿದಿ್ತೂಹಿನಿದ್ಞಿಷ್ಛ್ಲೂ್ದೂ ಉಲ್ಲೇಖಿಸಿದ ಶ್ರೀರಾಮುಲು, “ಇದು ಮಾನಗೆಟ್ಟ ಸರ್ಕಾರ. ರೈತರ ನೋವಿಗೆ ಸ್ಪಂದಿಸುವ ಬದಲು ಸರ್ಕಾರ ರಾಜಕೀಯ ಸಮಾವೇಶಗಳಲ್ಲಿ ತೊಡಗಿದೆ” ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದರು.ಕೇಂದ್ರದ ಕಿಸಾನ್ ಸನ್ಮಾನ್ ಯೋಜನೆ ರಾಜ್ಯದಲ್ಲಿ ಸಮರ​‍್ಕವಾಗಿ ಜಾರಿಯಾಗುತ್ತಿಲ್ಲ ಎಂದು ದೂರಿದ ಅವರು, ನೀರು, ವಿದ್ಯುತ್, ಭೂ ನೋಂದಣಿ ಸೇರಿದಂತೆ ಎಲ್ಲ ಸೇವೆಗಳ ದರ ಏರಿಕೆಯಾಗಿದೆ ಎಂದು ಹೇಳಿದರು. “ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ಮರಳು ಮಾಡುವ ಕೆಲಸ ನಡೆಯುತ್ತಿದೆ. ಜನರಿಗೆ ಶಾಶ್ವತ ಅಭಿವೃದ್ಧಿ ನೀಡುವ ಬದಲು ಮೋಸದ ರಾಜಕಾರಣ ನಡೆಯುತ್ತಿದೆ” ಎಂದು ಆರೋಪಿಸಿದರು.

ರಾಜ್ಯದ ಸಾರಿಗೆ ಇಲಾಖೆಯ ಸ್ಥಿತಿಗತಿಗಳ ಕುರಿತು ಮಾತನಾಡಿದ ಅವರು, ಕೆಎಸ್‌ಆರ್ಟಿಸಿ ನೌಕರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದರು. “ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರಕ್ಕೆ ಆಗುತ್ತಿಲ್ಲ. ವೇತನ ಹೆಚ್ಚಳವೂ ಇಲ್ಲ. ಹಳೆಯ ಬಸ್ಗಳೇ ರಸ್ತೆಯಲ್ಲಿ ಓಡುತ್ತಿವೆ. ಪಂಚರ್ ಹಾಕಿಸಲು ಹಣವಿಲ್ಲದ ಪರಿಸ್ಥಿತಿ ಬಂದಿದೆ. ಬಾಗಿಲುಗಳು ಕಿತ್ತು ಹೋದರೂ ದುರಸ್ತಿ ಮಾಡಲಾಗುತ್ತಿಲ್ಲ” ಎಂದು ಟೀಕಿಸಿದರು.

ಸುದ್ದಿ ಓದಿ