ಹೊಸ ಶೈಕ್ಷಣಿಕ ವರ್ಷದ ಆರಂಭ: ಹಿಲ್ಸೈಡ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ
Start of the new academic year: A warm welcome to students at Hillside International School
ಬೆಳಗಾವಿ 29 : ಮಹೇಶ್ ಫೌಂಡೇಶನ್ನ ಶಿಕ್ಷಣ ಸೇವಾ ಯೋಜನೆಯಾದ ಹಿಲ್ಸೈಡ್ ಇಂಟರ್ನ್ಯಾಷನಲ್ ಶಾಲೆಯು 2026ಹಿ27್ಫೂ ಶೈಕ್ಷಣಿಕ ವರ್ಷದ ಆರಂಭವನ್ನು ಸಂಭ್ರಮದಿಂದ ಆಚರಿಸಿತು.ಹೊಸ ಶೈಕ್ಷಣಿಕ ವರ್ಷದ ಮೊದಲ ದಿನ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಶಾಲಾ ಆವರಣವು ಮಕ್ಕಳ ನಗು, ಉತ್ಸಾಹ ಮತ್ತು ಹೊಸ ಕನಸುಗಳಿಂದ ಕಂಗೊಳಿಸಿತು. ಶಾಲೆಯಲ್ಲಿ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಶಾಲೆ ಒತ್ತು ನೀಡುತ್ತಿದೆ.
ವಿದ್ಯಾರ್ಥಿಗಳ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಕರು ವಿವಿಧ ಮನರಂಜನಾ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಆಯೋಜಿಸಿದರು. ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ಕಲಿಕೆಯ ಆಸಕ್ತಿಯನ್ನು ಬೆಳೆಸುವತ್ತ ಶಾಲೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು. ಮಹೇಶ್ ಫೌಂಡೇಶನ್ ಸಮಾಜ ಸೇವೆಯಲ್ಲಿ ಹೆಜ್ಜೆ ಇಡುತ್ತಿದ್ದು. ಇದಕ್ಕೆ ಬಲ ನೀಡಿ ಸಹಕರಿಸುತ್ತಿರುವ ಪೋಷಕರು, ದಾನಿಗಳು, ಹಿತೈಷಿಗಳು ಮತ್ತು ಬೆಂಬಲಿಗರಿಗೆ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದ್ದು, ನಿರ್ಮಾಣ ಹಂತದಲ್ಲಿರುವ ನೂತನ ಅತ್ಯಾಧುನಿಕ ಕ್ಯಾಂಪಸ್ನೊಂದಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡುವ ವಿಶ್ವಾಸವನ್ನ ಮಹೇಶ್ ಫೌಂಡೇಶನ್ ಅಧ್ಯಕ್ಷ ಮಹೇಶ್ ಜಾಧವ್ ವ್ಯಕ್ತಪಡಿಸಿದರು.
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು 