ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರಿಂದ ವಸತಿ ನಿಲಯ ಮತ್ತು ಶಾಲೆಗೆ ಭೇಟಿ ಪರೀಶೀಲನೆ
State Child Rights Protection Commission Chairman Shashidhar Kosambe visits and inspects the hostel
ಬಳ್ಳಾರಿ 27: ನಗರದ ಬಸವ ಭವನ ಹತ್ತಿರದ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಗುರುವಾರ ಭೇಟಿ ನೀಡಿ ವಸತಿ ನಿಲಯದಲ್ಲಿ ಕೊಠಡಿ, ಶೌಚಾಲಯ, ಉಗ್ರಾಣ ಕೊಠಡಿ, ಕುಡಿಯುವ ನೀರಿನ ಘಟಕ, ಅಡುಗೆ ಕೊಣೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.ಈ ವೇಳೆ ವಸತಿ ನಿಲಯದಲ್ಲಿ ಅಡುಗೆ ಬಳಸುವ ಕಳಪೆ ತರಕಾರಿ ಮತ್ತು ಆಹಾರ ಧಾನ್ಯ ಕಂಡು ವಾರ್ಡನ್ ವಿರುದ್ಧ ಅಸಮಾಧಾನ ವ್ಯಪಡಿಸಿದರು. ಮುಂದಿನ ದಿನಗಳಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.ವಿದ್ಯಾರ್ಥಿನಿಯರಿಗೆ ಏನಾದರೂ ಸಮಸ್ಯೆ ಇದ್ದಲ್ಲಿ ಹಾಗೂ ತೊಂದರೆ ಆದಲ್ಲಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕಿವಿಮಾತು ಹೇಳಿದರು.
ಬಳಿಕ ನಗರದ ಹೊರವಲಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಅಗತ್ಯ ಸಲಹೆ-ಸೂಚನೆ ನೀಡಿದರು.ನಂತರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ದಿನನಿತ್ಯದ ಆಹಾರ ನೀಡುವ ವೇಳಾಪಟ್ಟಿ, ಕಾಲಕಾಲಕ್ಕೆ ಖೈದಿಗಳ ಆರೋಗ್ಯ ತಪಾಸಣೆ, ಅವರಿಗೆ ಒದಗಿಸಲಾದ ಕೆಲಸ ಕುರಿತು ಕಾರಾಗೃಹ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ನಿರೂಪಣಾಧಿಕಾರಿ ಸವಿತಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಅಧಿಕಾರಿಗಳು ಹಾಜರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 