ಸೇವಾ ಭದ್ರತೆ, ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಆಗ್ರಹ
State government urged to fulfill various demands, including job security and equal pay
ಹಾವೇರಿ, ಜು.21: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಯ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜುಲೈ 24ರಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಹನುಮೇಗೌಡ ತಿಳಿಸಿದ್ದಾರೆ.
ನಗರದ ಪರೀವೀಕ್ಷಣಾ ಮಂದಿರದಲ್ಲಿ (ಐಬಿ) ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗ ಮತ್ತು ಪಂಗಡಗಳ ಕಲ್ಯಾಣ ಇಲಾಖೆ,
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಹಲವು ವರ್ಷಗಳಿಂದ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರು, ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿ, ನರ್ಸ್ಗಳು ಹಾಗೂ ಡಿ-ಗ್ರೂಪ್ ಸಿಬ್ಬಂದಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.
ಹೊರಗುತ್ತಿಗೆ ಸಿಬ್ಬಂದಿಗೆ ನಿವೃತ್ತಿವರೆಗೂ ಸೇವಾ ಭದ್ರತೆ ನೀಡಬೇಕು, ಮಾಸಿಕ ವೇತನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು, ವಾರದ ರಜೆ, ಹಬ್ಬದ ರಜೆ, ವೇತನ ಚೀಟಿ, ಇಎಸ್‌ಐ ಮತ್ತು ಪಿಎಫ್ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಇದಲ್ಲದೆ, ಸುಪ್ರೀಂ ಕೋರ್ಟ್ ಆದೇಶದಂತೆ "ಸಮಾನ ಕೆಲಸಕ್ಕೆ ಸಮಾನ ವೇತನ" ನೀಡಬೇಕು, ಬಾಕಿ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು, ನಿವೃತ್ತಿಯ ನಂತರ ಜೀವನ ನಿರ್ವಹಣೆಗೆ 5 ಲಕ್ಷ ಪರಿಹಾರ ನೀಡಬೇಕು ಹಾಗೂ ಜಿಲ್ಲಾಮಟ್ಟದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಶಾಂತಕ್ಕ ಗಡ್ಡಿಯವರ, ಕಾರ್ಯದರ್ಶಿ ಎಚ್.ಎಚ್. ನದಾಫ್, ಕಾರ್ಯಾಧ್ಯಕ್ಷ ಬಸವರಾಜ ಎಸ್., ಉಪಾಧ್ಯಕ್ಷ ಶಿವರಾಜ ಕುಮಾರ ಮಾರನಬೀಡ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 