ಗುಣಮಟ್ಟದ ಶಿಕ್ಷಣಕ್ಕೆ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ಬದ್ಧ: ಪ್ರಕಾಶ ಹುಕ್ಕೇರಿ
ಗುಣಮಟ್ಟದ ಶಿಕ್ಷಣಕ್ಕೆ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ಬದ್ಧ: ಪ್ರಕಾಶ ಹುಕ್ಕೇರಿ
ಚಿಕ್ಕೋಡಿ 04: ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲದ ದೃಷ್ಠಿಯಿಂದ ಶಿಕ್ಷಕರು ಮತ್ತು ಅಧಿಕಾರಿಗಳು ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ವಾಯವ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.
ಸೋಮವಾರ ಚಿಕ್ಕೋಡಿ ಪಟ್ಟಣದ ಶಾಸಕರ ಮಾದರಿ ಶಾಲೆಗೆ ಮಂಜೂರಾದ 2 ಶಾಲಾ ಕೊಠಡಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಖಾಸಗಿ ಶಾಲೆಗಳಿಂತ ಸರ್ಕಾರಿ ಶಾಲೆಗಳು ಹೆಚ್ಚು ಪ್ರಗತಿಯಾಗುತ್ತಿರುವ ಪರಿಣಾಮ ಮಕ್ಕಳು ಹೆಚ್ಚು ಸರ್ಕಾರಿ ಶಾಲೆ ಕಡೆ ವಾಲುತ್ತಿರುವುದು ಸಂತಸದ ವಿಷಯ. ಶಿಕ್ಷಕರು ಗುಣಮಟ್ಟದ ಬೋಧನೆ ಮಾಡಿ ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು ಎಂದರು.
ಶಾಸಕರ ಮಾದರಿ ಶಾಲೆಗೆ ಎರಡು ಶಾಲಾ ಕೊಠಡಿ ನಿರ್ಮಾಣಕ್ಕೆ 32 ಲಕ್ಷ ರೂ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಠಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಮತಗ್ತು ಕೊಳವೆ ಬಾವಿಗೆ 8 ಲಕ್ಷ ರೂ ಅನುದಾನ ಮಂಜೂರಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಪುರಸಭೆ ಉಪಾಧ್ಯಕ್ಷ ಇರ್ಫಾನ ಬೇಪಾರಿ, ಡಿಡಿಪಿಐ ಆರ್.ಎಸ್.ಸೀತಾರಾಮು, ಬಿಇಒ ಬಿ.ಎ.ಮೇಕನಮರಡಿ, ಪುರಸಭೆ ಸದಸ್ಯರಾದ ಸಾಭೀರ ಜಮಾದಾರ, ಗುಲಾಬ ಬಾಗವಾನ, ಸುಲೇಮಾನ ನಾಲಬಂದ ಸೇರಿದಂತೆ ಮುಂತಾದವರು ಇದ್ದರು.