11 ಜನ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ರಾಜ್ಯಮಟ್ಟದ ಶಿಕ್ಷಣ ಸೇವಾರತ್ನ ಪ್ರಶಸ್ತಿ
ಜಮಖಂಡಿ 23: ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 11 ಜನ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ರಾಜ್ಯಮಟ್ಟದ ಶಿಕ್ಷಣ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಮಖಂಡಿ ತಾಲೂಕಿನ ಶಿಕ್ಷಣ ಕ್ಷೇತ್ರದ ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದವರಲ್ಲಿ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಶ್ರೀಮತಿ ಪಂಚಾಕ್ಷರಿ ಎನ್. ನಂದೇಶ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಶ್ರೀಶೈಲ ಕಲ್ಲಪ್ಪ ಕಾಂಬಳೆ, ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರಾಚಾರ್ಯರಾದ ಶ್ರೀಮತಿ ನವಭಾನು ಮರಲಿಂಗಪ್ಪ ಚೌರ, ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಾಚಾರ್ಯ ಅಪ್ಪಾಸಾಬ ರಾಮಪ್ಪ ಹೊಸಮನಿ, ಬಸವಜ್ಯೋತಿ ಶಾಲೆಯ ಶಿಕ್ಷಕಿ ಶ್ರೀಮತಿ ಮಮತಾ ಬಾಲಕೃಷ್ಣ ಬನ್ನಿಗೋಳಮಠ, ಜಂಬಗಿ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಶ್ರೀಮತಿ ಸಮೀನಾಯಾಸ್ಮೀನ ಅಬ್ದುಲ್ ಲಸ್ಕರಿ,
ಆಜಾದ್ ನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಸುನೀತಾ ವಿಜಯ ಸವದಿ, ಹಿರೇಪಡಸಲಗಿ ಗ್ರಾಮದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಶಿಕ್ಷಕ ಲಕ್ಷ್ಮಣ ಸಂಗಪ್ಪ ಚವ್ಹಾಣ, ಜಂಬಗಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶೀರೀನ ಕೆ. ನಿಂಬಾಳ, ಹಿರೇಪಡಸಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಮಹಾನಂದ ನಾಗಪ್ಪ ಕಳಸನ್ನವರ ಹಾಗೂ ಕೊಣ್ಣೂರು ಗ್ರಾಮದ ಕರಿಸಿದ್ದೇಶ್ವರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಜಗದೀಶ ವಿಠ್ಠಲ ಕಾಂಬಳೆ ಸೇರಿದ್ದಾರೆ. ಒಟ್ಟು ಹನ್ನೊಂದು ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ರಾಜ್ಯಮಟ್ಟದ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ಎಸ್.ಜಿ., ರಾಜ್ಯ ಖಜಾಂಚಿ ಗಂಗಾಧರ, ದಯಾನಂದ ಎಂ., ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ, ಮಹಾರಾಜ ಗ್ರೂಪ್ ಉದ್ಯಮಿ ಉಮೇಶ ವಿ., ಸಾಹಿತಿ ಸುರೇಶ ಅಂಗಡಿ, ಡಾ. ದೊಡ್ಡಪ್ಪ ಪೂಜಾರಿ ಹಂಡೆಕಲ್, ಶಶಿಕಾಂತ ಎನ್. ತೇರದಾಳ, ದೀಲೀಪ್ಪ ದಾಶ್ಯಾಳ, ಹಲಗಿ ಸುರೇಶ, ಕುಮಾರ ನಾಯ್ಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.