ಬಿಎಲ್ಡಿಇ ವಿದ್ಯಾರ್ಥಿನಿಯರಿಗೆ ರಾಜ್ಯಮಟ್ಟದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ
State-level Best Research Award for BLDE students
ವಿಜಯಪುರ 18: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಗೂ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬಿಜಿಎಸ್ ತಾಂತ್ರಿಕ ಸಂಸ್ಥೆ, ಬಿಜಿ ನಗರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 49ನೇ ಸರಣಿ ವಿದ್ಯಾರ್ಥಿ ಯೋಜನಾ ಕಾರ್ಯಕ್ರಮ (ಖಕಕ-2026)ರಲ್ಲಿ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ.
2026ರ ಜುಲೈ 17 ಮತ್ತು 18ರಂದು ನಡೆದ ರಾಜ್ಯಮಟ್ಟದ ಪೋಸ್ಟರ್ ಪ್ರಸ್ತುತಿ ಹಾಗೂ ಯೋಜನಾ ಪ್ರದರ್ಶನದಲ್ಲಿ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಜೈವಿಕ ತಂತ್ರಜ್ಞಾನ ಹಾಗೂ ಸೂಕ್ಷ್ಮಜೀವಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯರಾದ ಸುಪ್ರೀತಾ ಆಸ್ಕಿ ಮತ್ತು ರುಚಿತಾ ಕುಂದರಗಿ ಅವರು ಮಂಡಿಸಿದ ಸಂಶೋಧನಾ ಯೋಜನೆಗೆ ಈ ಪ್ರಶಸ್ತಿ ಲಭಿಸಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಂದ ಆಯ್ಕೆಯಾದ ಸಂಶೋಧನಾ ಯೋಜನೆಗಳ ಪೈಕಿ ಇವರ ಯೋಜನೆ ಅತ್ಯುತ್ತಮ ಸಂಶೋಧನಾ ಯೋಜನೆಯಾಗಿ ಆಯ್ಕೆಯಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನವಾಯಿತು. ಈ ಮೂಲಕ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ, ಸಹಕುಲಾಧಿಪತಿ ಡಾ. ವೈ. ಎಂ. ಜಯರಾಜ್, ಕುಲಪತಿ ಡಾ. ಅರುಣ ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ಸಂಶೋಧನಾ ಕಾರ್ಯಗಳಲ್ಲಿಯೂ ವಿದ್ಯಾರ್ಥಿನಿಯರು ಇದೇ ರೀತಿಯ ಯಶಸ್ಸು ಸಾಧಿಸಲಿ ಎಂದು ಅವರು ಶುಭ ಹಾರೈಸಿದ್ದಾರೆ.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 