ಇಂಡಿ

ಜಯಮಾಲಾಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ಜಯಮಾಲಾಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ಇಂಡಿ 19: ತಾಲೂಕಿನ ಚವಡಿಹಾಳ ಗ್ರಾಮದ ಗುರುಬಸವ ಪ್ರೌಢಶಾಲೆಯ ಶಿಕ್ಷಕಿ ಜಯಮಾಲಾ ಸುಭಾಶ್ಚಂದ್ರ ಪಾಟೀಲ್ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಕ್ಕಾಗಿ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಲಭಿಸಿದೆ. 

ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 

ಶಿಕ್ಷಕಿ ಜಯಮಾಲಾ ಅವರಿಗೆ ಸಂಸ್ಥೆಯ ಅಧ್ಯಕ್ಷ-ಆಡಳಿತ ಮಂಡಳಿ ಮತ್ತು ಶಿಕ್ಷಕ ಬಳಗ ಅಭಿನಂದಿಸಿದೆ. 


ಸುದ್ದಿ ಓದಿ