ಧಾರವಾಡ - ಹುಬ್ಬಳ್ಳಿ

ಆಂಗ್ಲ ಮಾಧ್ಯಮ ಶಾಲೆಗೆ ರಾಜ್ಯಮಟ್ಟದ ಉತ್ತಮ ಪ್ರಶಸ್ತಿ

ಆಂಗ್ಲ ಮಾಧ್ಯಮ ಶಾಲೆಗೆ ರಾಜ್ಯಮಟ್ಟದ ಉತ್ತಮ  ಪ್ರಶಸ್ತಿ

ಧಾರವಾಡ 07: ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯು 2023-24 ನೇ ಸಾಲಿನಲ್ಲಿ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಯಲ್ಲಿ 100ಅ ರಷ್ಟು ಫಲಿತಾಂಶ ಪಡೆದ ನಿಮಿತ್ತ ಕರ್ನಾಟಕ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ (ರಿ) ಬೆಂಗಳೂರು ವತಿಯಿಂದ ಅಂತರಾಷ್ಟ್ರೀಯ ಶಿಕ್ಷಕ ದಿನೋತ್ಸವದ ಅಂಗವಾಗಿ ರಾಜ್ಯಮಟ್ಟದ ಉತ್ತಮ ಶಾಲೆ ಎಂಬ ಪ್ರಶಸ್ತಿಯನ್ನು ಧಾರವಾಡದ ನೌಕರರ ಭವನದಲ್ಲಿ ನೀಡಿ ಗೌರವಿಸಿ. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಸ್‌.ಎಸ್‌.ಎಲ್‌.ಸಿ  ಬೋಧಿಸುವ ಎಲ್ಲಾ ಶಿಕ್ಷಕರನ್ನು ಸನ್ಮಾನಿಸಲಾಗಿದ್ದು, ಸಾಧನೆಗೆ ಕಾರಣಿಕರ್ತರಾದ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣು ಪಾಟೀಲ್ ಹಾಗೂ ಶಿಕ್ಷಕ ವೃಂದವನ್ನು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಅವರು ಅಭಿನಂದಿಸಿದರು. 


ಸುದ್ದಿ ಓದಿ