ಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ, ನಶಾಮುಕ್ತ ಭಾರತ ಅಭಿಯಾನ
State-level council meeting and 'Nashamukt Bharat Abhiyan' (Drug-Free India Campaign) in Ballari.
ಲೋಕದರ್ಶನ ವರದಿ
ಬಳ್ಳಾರಿ, ಆ.೨೦: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ವತಿಯಿಂದ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಮಂಗಳವಾರ ರಾಜ್ಯ ಮಟ್ಟದ ಪರಿಷತ್ ಸಭೆ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಿವೃತ್ತ ನೌಕರರು ನಿವೃತ್ತಿ ಜೀವನವನ್ನು ಸುಖ-ಸಂತೋಷದಿAದ ಕಳೆಯಬೇಕು ಎಂದು ಆಶಿಸಿದರು.
ಸಂಘದ ರಾಜ್ಯಾಧ್ಯಕ್ಷ ಡಾ. ಎಲ್. ಬೈರಪ್ಪ ಮಾತನಾಡಿ, ‘ಸಂಧ್ಯಾ ಸುರಕ್ಷಾ’ ಯೋಜನೆಯಡಿ ೭೦ ವರ್ಷ ಪೂರೈಸಿದ ಪಿಂಚಣಿದಾರರಿಗೆ ಶೇ.೧೦ರಷ್ಟು ಪಿಂಚಣಿ ಹೆಚ್ಚಳ ಹಾಗೂ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ನಿವೃತ್ತ ನೌಕರರ ಸಂಘದ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನಶಾಮುಕ್ತ ಭಾರತ ಅಭಿಯಾನಕ್ಕೆ ಪ್ರತಿಜ್ಞೆ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೂಚನೆಯಂತೆ ‘ನಶಾಮುಕ್ತ ಭಾರತ ಅಭಿಯಾನ’ದಡಿ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ ಬೋಧಿಸಲಾಯಿತು. ಶಾಲಾ-ಕಾಲೇಜುಗಳಲ್ಲಿ ಕ್ರೀಡಾ ಚಟುವಟಿಕೆ, ಸಸಿ ನೆಡುವ ಕಾರ್ಯಕ್ರಮ ಹಾಗೂ ಜಿಲ್ಲೆಯಾದ್ಯಂತ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಪುಸ್ತಕ ಬಿಡುಗಡೆ, ಸನ್ಮಾನ : ಮಾಜಿ ಖಜಾಂಚಿ ಚೌಡಯ್ಯ ರಚಿಸಿದ ‘ಕಿತ್ತೂರು ಕಿಡಿ’ ಹಾಗೂ ‘ಬೆಳವಡಿ ಮಲ್ಲಮ್ಮ’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ೭೫ ವರ್ಷ ಪೂರೈಸಿದ ಬಳ್ಳಾರಿ ಜಿಲ್ಲೆಯ ನಿವೃತ್ತ ನೌಕರರು ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಲಾಯಿತು.
ಲಕ್ಷಿö್ಮÃ ಕಲಾ ಕ್ಷೇತ್ರದ ಮಕ್ಕಳಿಂದ ಸಾಂಸ್ಕöÈತಿಕ ನೃತ್ಯ, ಜನಪದ ಗಾಯಕರಾದ ಎಮ್ಮಿಗನೂರು ಜಡೆಶ್, ನಾಗೇಂದ್ರ ಬೆಂಗಳೂರು ಹಾಗೂ ದತ್ತ ಗುರುನಾಥ್ ಅವರಿಂದ ಗೀತಗಾಯನ ನಡೆಯಿತು.
ಜಿಲ್ಲಾಧ್ಯಕ್ಷ ಡಾ. ಎಂ.ಟಿ. ಮಲ್ಲೇಶ್ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನಿ, ನಿವೃತ್ತ ನ್ಯಾಯಾಧೀಶ ಎಚ್. ರಾಮು, ಸಂಘದ ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಖಜಾಂಚಿ ಎಸ್.ಎಂ. ಆನಂದಪ್ಪ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ೫೦೦ಕ್ಕೂ ಹೆಚ್ಚು ನಿವೃತ್ತ ನೌಕರರು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ನಿವೃತ್ತ ಹಿರಿಯ ಮುಖ್ಯ ಗುರುಗಳಾದ ಮೆಹತಾಬ್ ಹಾಗೂ ಎಂ. ಶಿವಾಜಿರಾವ್ ನೆರವೇರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 