ಬಾಲಕರ ಥ್ರೋ ಬಾಲ್ ಪಂದ್ಯದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ.
ಮುಂಡರಗಿ 22: ಗದಗ ನಗರದ ಚಿಕ್ಕಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ಬಾಲಕರ ಥ್ರೋ ಬಾಲ್ ಪಂದ್ಯಾಟದಲ್ಲಿ ಹಿರೇವಡ್ಡಟ್ಟಿಯ ಸರಕಾರಿ ಎಸ್.ವಿ.ಎಸ್.ಕೆ ಪದವಿ ಪೂರ್ವ ಕಾಲೇಜಿನ ನಡೆದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ ಆಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಭಿನಂದಿಸಿದ್ದಾರೆ.