ಶಾಲಾ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ರಾಜ್ಯ ಮಟ್ಟದ ಆಯ್ಕೆ
State-level selection for school students' sports achievements
ಲೋಕದರ್ಶನ ವರದಿ
ಧಾರವಾಡ 03: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಜಿಮ್ನಾಸ್ಟಿಕ್ಸ್ ವಿಭಾಗದಲ್ಲಿ ನಿಸರ್ಗ ಮುಂಡಿನಮನಿ, ಸ್ಪರ್ಶಿತಾ ಕುಲಕರ್ಣಿ, ಲಿಖಿತ್ ಬಳ್ಳಾರಿ ಹಾಗೂ ಪೂರ್ವಿ ದೊಡ್ಡಮನಿ ಉತ್ತಮ ಸಾಧನೆ ಮಾಡಿದ್ದಾರೆ. ಟೇಬಲ್ ಟೆನಿಸ್‌ನಲ್ಲಿ ಸ್ನೇಹಲ್ ಸಾಲುಂಕೆ ಮತ್ತು ಅಮೋಘ ವರ್ಷ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚೆಸ್ ಸ್ಪರ್ಧೆಯಲ್ಲಿ ಸಹನಾ ತಡಕೋಡ್ ಹಾಗೂ ಭೂಮಿಕಾ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್, ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್, ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಪ್ರಾಂಶುಪಾಲೆ ಶ್ರೀಮತಿ ದಯಾನ ಜೋಗಿನ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ, ಮುಂದಿನ ಸ್ಪರ್ಧೆಗಳಿಗೆ ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 