ರಾಜ್ಯ ಮಟ್ಟಕ್ಕೆ ಚರಣ ಆಯ್ಕೆ
ಮುಂಡಗೋಡ: ಶಿರಸಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ಪಾಳಾ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಚರಣ ಬಿ.ಕೆ. ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣ ಸಂಯೋಜಕರು, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.