ಬಳ್ಳಾರಿ

ಎಸ್‌.ಸಿ,ಎಸ್‌.ಟಿ ಹಣ ದುರುಪಯೋಗ ರಾಜ್ಯಾಧ್ಯಾಂತ ಧರಣಿ :ಜಿಲ್ಲಾಧ್ಯಾಕ್ಷ ಮುನಿಸ್ವಾಮಿ

ಎಸ್‌.ಸಿ,ಎಸ್‌.ಟಿ ಹಣ ದುರುಪಯೋಗ ರಾಜ್ಯಾಧ್ಯಾಂತ ಧರಣಿ :ಜಿಲ್ಲಾಧ್ಯಾಕ್ಷ ಮುನಿಸ್ವಾಮಿ

ಬಳ್ಳಾರಿ..24: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗಕ್ಕೆ ಲಕ್ಷಾಂತರ ಕೋಟಿ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಮೀಸಲು ಹಣವನ್ನು ಅ ಜನಾಂಗದ ಪ್ರಗತಿಗೆ ಬಳಸದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಹಾನ್ ದ್ರೋಹವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಎಸ್‌.ಪಿ ಜಿಲ್ಲಾಧ್ಯಾಕ್ಷ ಮುನಿಸ್ವಾಮಿ ತಿಳಿಸಿದರು.   

ಅವರು ಇಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ಸಿ/ಎಸ್ಟಿ ಸಮುದಾಯಗಳ ಅಭಿವೃದ್ಧಿಗೆಂದು ಜಾರಿಗೆ ತಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ಅನ್ವಯ  2023-24 ಮತ್ತು 2024-25ನೇ ಸಾಲಿನ 2 ವರ್ಷಗಳಲ್ಲಿ ರೂ. 25 ಸಾವಿರದ 39 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ನೇರವಾಗಿ ಎಸ್ ಸಿ,ಎಸ್ಟಿಗಳ ಕುತ್ತಿಗೆ ಕುಯ್ಯುವ ಕೆಲಸ ಮಾಡಿದೆ.2014 ರಿಂದ ಇದುವರೆಗೆ ಕಾಂಗ್ರೆಸ್,ಬಿಜೆಪಿ ಮತ್ತು ಜೆಡಿಎಸ್ ನ ಈ ಮೂರು ಸರ್ಕಾರಗಳು ಒಟ್ಟು ಸುಮಾರು 70 ಸಾವಿರ ಕೋಟಿ ರೂಪಾಯಿಗಳ ದುರ್ಬಳಕೆ ಮಾಡಿಕೊಂಡು ಮಹಾನ್ ದ್ರೋಹ ಬಗೆದಿವೆ. ಎಸ್ ಸಿ,ಎಸ್ಟಿ ಮೀಸಲು ಹಣವನ್ನು ದುರ್ಬಳಕೆ ಮಾಡಲು ನಾಂದಿ ಹಾಡಿದ್ದು ಇದೇ ಕಾಂಗ್ರೆಸ್ ಸರ್ಕಾರ. ಮುಂದೆ ಬಂದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳೂ ಕೂಡ ಇದೇ ದಾರಿಯನ್ನು ಹಿಡಿದು ಎಸ್ ಸಿ ಎಸ್ಟಿ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಹಿಂಜರಿಯಲಿಲ್ಲ ಇದು ತುಂಬಾ ಖೇದಕರವ ವಿಷಯದ ಎಂದರು.   

ಎಸ್ ಸಿ ಎಸ್ ಪಿ ,ಟಿ ಎಸ್ ಪಿ ಕಾನೂನು ಜಾರಿಯಾದಾಗಿನಿಂದ ಇದೂವರೆಗೆ ಹತ್ತು ವರ್ಷಗಳಲ್ಲಿ 2 ಲಕ್ಷದ 56 ಸಾವಿರ ಕೋಟಿಗಳನ್ನು ಈ ಯೋಜನೆಗೆ ಮೀಸಲಿರಿಸಲಾಗಿದೆ. ಇಷ್ಟು ಹಣದಿಂದ ಕರ್ನಾಟಕದ ಎಸ್ಸಿ,ಎಸ್ಟಿ ಜನಾಂಗದ ಅಭಿವೃದ್ಧಿಗೆ ಮಾಡಬಹುದಾಗಿದ್ದ ಯೋಜನೆಗಳು ವಿದ್ಯಾರ್ಥಿಗಳಿಗೆ   ಪ್ರಾಥಮಿಕ  ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ, ಬಿ.ಇ, ಎಂ.ಬಿ.ಬಿ.ಎಸ್‌. ಪಿಹೆಚ್‌.ಡಿ ವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು.  

ಕಾಂಗ್ರೆಸ್ ಸರ್ಕಾರವು ಇಂದು ಎಸ್ ಸಿ ಎಸ್ ಟಿ ಗಳಿಗೆ ಅನ್ಯಾಯ ಮಾಡಿದಾಗ ಸುಮ್ಮನಿದ್ದರೆ ನಾಳೆ ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯ ಮಾಡಲು ಮುಂದಾಗುತ್ತದೆ.ಬಿಜೆಪಿ, ಜೆಡಿಎಸ್ ಇದೇ ಚಾಳಿಯನ್ನು ಮುಂದುವರೆಸುತ್ತವೆ. ಏಳಿ ಎದ್ದೇಳಿ ಜಾಗೃತರಾಗಿ ಬಂಧುಗಳೇ, ಈ ಕಾಂಗ್ರೆಸ್,ಬಿಜೆಪಿ, ಜೆಡಿಎಸ್ ನಂತಹ ಮನುವಾದಿ ಪಕ್ಷಗಳಿಂದ ಖಂಡಿತಾ ನಮ್ಮ ಉದ್ಧಾರ ಸಾಧ್ಯವಿಲ್ಲ. ಬಾಬಾಸಾಹೇಬರು ಹೇಳಿದಂತೆ "ದಗಾಕೋರರ ಮನಬದಲಿಸಿ ನಮ್ಮ ನಿಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ನಿರಂತರ  ಹೋರಾಟದಿಂದ ಮಾತ್ರ ಇದು ಸಾಧ್ಯ ಎಂಬುದನ್ನು ಮರೆಯುವುದು ಬೇಡ". ಜ್ಯಾತ್ಯಾತೀತ ಮನುವಾದಿ ಕಾಂಗ್ರೆಸ್ ಮತ್ತು ಜಾತಿವಾದಿ ಮನುವಾದಿ ಬಿಜೆಪಿ ಮತ್ತು ಜೆಡಿಎಸ್ ಒಂದೇ ದೇಹದ ಎರಡು ಕೈಗಳಿದ್ದಂತೆ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇವರಿಂದ ಬಹುಜನರ ಉದ್ಧಾರ ಸಾದ್ಯವಿಲ್ಲ ನಾವು ಹೋರಾಟದ ಮುಖಾಂತರ ನಮ್ಮ ಸೌಲಭ್ಯಗಳನ್ನು ಮತ್ತು ಹಕ್ಕುಗಳನ್ನು ಪಡೆದುಕೊಳ್ಳಬೇಕಿದೆ ಎಂದರು. 


ಸುದ್ದಿ ಓದಿ