ಅಂತರರಾಷ್ಟ್ರೀಯ

ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ; ಪೊಲೀಸರಿಂದ ತನಿಖೆ

ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ; ಪೊಲೀಸರಿಂದ ತನಿಖೆ

ಪಾಟ್ನಾ15:  ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ಚಂಪಾರಣ್ ಸತ್ಯಾಗ್ರಹ ಆರಂಭಿಸಿದ ಸ್ಥಳದ ಬಳಿ ಸ್ಥಾಪಿಸಲಾಗಿದ್ದ ಅವರ ಪ್ರತಿಮೆಯನ್ನು ಕೆಲವು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಆಡಳಿತ ಮಂಗಳವಾರ ತಿಳಿಸಿದೆ.ಮಾದಕ ವ್ಯಸನಿಗಳೆಂದು ಹೇಳಲಾದ ಕೆಲವು ದುಷ್ಕರ್ಮಿಗಳು ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿದರು. ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡವನ್ನು ರಚಿಸಲಾಗಿದೆ. ಇಲ್ಲಿ ಒಬ್ಬ ಗೃಹರಕ್ಷಕನನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ.ಸಿಎಸ್ ಆರ್ ಚಟುವಟಿಕೆಯಡಿ ಪವರ್ ಗ್ರಿಡ್ ಕಾರ್ಪೊರೇಷನ್ ಪ್ರತಿಮೆಯನ್ನು ಸ್ಥಾಪಿಸಿದೆ. ಈ ಸ್ಥಳವನ್ನು ಔಪಚಾರಿಕವಾಗಿ ಸರ್ಕಾರಕ್ಕೆ ಹಸ್ತಾಂತರಿಸಿಲ್ಲ, ಅವರು ಇಲ್ಲಿ ಸರಿಯಾದ ಭದ್ರತಾ ವ್ಯವಸ್ಥೆಯನ್ನು ಏಕೆ ಮಾಡಲಿಲ್ಲ ಎಂದು ಎಂದು ಪೂರ್ವ ಚಂಪಾರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಪಿಲ್ ಅಶೋಕ್ ಪ್ರಶ್ನಿಸಿದರು.“ಪೊಲೀಸರು ತನಿಖೆ ಕೈಗೊಂಡಿದ್ದಾರೆ ಮತ್ತು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವವರು ಕಾನೂನು ಪ್ರಕಾರ ಕ್ರಮ ಎದುರಿಸಬೇಕಾಗುತ್ತದೆ ಎಂದು ಕಪಿಲ್ ಅಶೋಕ್ ಹೇಳಿದರು.ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತನ್ನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಉದ್ಯಾನವನದ ನಿರ್ವಹಣಾ ಕಾರ್ಯವನ್ನು ನಡೆಸುತ್ತಿದೆ. ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲು ನಾವು ಅವರಿಗೆ ಸಲಹೆ ನೀಡುತ್ತೇವೆ. ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯನ್ನು ಖಚಿತಪಡಿಸಿಕೊಳ್ಳಲಾಗುವುದು. ಪ್ರತಿಮೆಯ ಮರು ಪ್ರತಿಷ್ಠಾಪನೆಯನ್ನು ಜಿಲ್ಲಾಡಳಿತ ಮಾಡಲಿದೆ ಎಂದು ಹೇಳಿದರು.

ಸುದ್ದಿ ಓದಿ