ವಿಜಯಪುರ

ಮಾದಕ ವ್ಯಸನದಿಂದ ದೂರವಿರಿ: ವಿದ್ಯಾರ್ಥಿಗಳಿಗೆ ಪೊಲೀಸರ ಕಿವಿಮಾತು

ಮಾದಕ ವ್ಯಸನದಿಂದ ದೂರವಿರಿ: ವಿದ್ಯಾರ್ಥಿಗಳಿಗೆ ಪೊಲೀಸರ ಕಿವಿಮಾತು

ಕೊಲ್ಹಾರ 11 : ಹೆತ್ತವರ ಕನಸಿಗೆ ಕೊಳ್ಳೆ ಇಟ್ಟು, ನಾಳಿನ ನಾಡಿನ ನಕ್ಷತ್ರಗಳಾಗಿ ಬೆಳೆಯಬೇಕಾದ ವಿದ್ಯಾರ್ಥಿಗಳು ಇಂದು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ವಿದ್ಯಾರ್ಥಿಗಳು ಇಂತಹ ದುಷ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೂಡಗಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್‌ಐ ವಿ.ಎಚ್‌. ಹತ್ತಳ್ಳಿ ಕರೆ ನೀಡಿದರು. ತೆಲಗಿ ಗ್ರಾಮದ ಸದ್ಗುರು ಸದಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕೂಡಗಿ ಪೊಲೀಸ್ ಠಾಣೆ ವತಿಯಿಂದ ಶನಿವಾರ ಆಯೋಜಿಸಿದ್ದ ಎನ್ಟಿ ಡ್ರಗ್ಸ್‌ ಹಿ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ತಡೆ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಅಥವಾ ದುರ್ಬಳಕೆಯಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ, ಸಮಾಜವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸುವ ಕಾರ್ಯಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಲ್‌.ಎಚ್‌. ಪತ್ತಾರ, ಪೊಲೀಸ್ ಸಿಬ್ಬಂದಿಗಳಾದ ಮಲ್ಲು ಆರ್‌. ಆಶಂಪೂರ, ಸುನೀಲ ತಿವಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ