ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ
ಉಡುಪಿ, ಡಿಸೆಂಬರ್ 25,ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ
ಮೂಲಗಳು ತಿಳಿಸಿವೆ. ವೆಂಟಿಲೇಟರ್ನಲ್ಲೇ ಚಿಕಿತ್ಸೆ
ಮುಂದುವರೆಸಲಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ
ವೈದ್ಯರು ತಿಳಿಸಿದ್ದಾರೆ. ಶ್ರೀಗಳನ್ನು ವೆಂಟಿಲೇಟರ್ನಲ್ಲಿ ಇಟ್ಟಿರುವುದರಿಂದ ರಾಜಕೀಯ ನಾಯಕರು, ವಿಐಪಿಗಳು ಹಾಗೂ ಯಾವುದೆ ಭಕ್ತರ ಭೇಟಿಗೆ
ಅವಕಾಶವಿಲ್ಲ ಹೀಗಾಗಿ ಯಾರೂ ಸಹ ಆಸ್ಪತ್ರೆಗೆ ಬರಬಾರದು ಎಂದು ವೈದ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.ದೆಹಲಿ
ಏಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಕೆಎಂಸಿ ಆಸ್ಪತ್ರೆ ವೈದ್ಯರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.
ಅಲ್ಲಿನ ವೈದ್ಯರ ಸಲಹೆ ಮತ್ತು ಮಾರ್ಗದರ್ಶನದಂತೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ
ಯಡಿಯೂರಪ್ಪ ಇಂದು ಕೃಷ್ಣಮಠಕ್ಕೆ ಭೇಟಿ ನೀಡಿ ನಂತರ ಮತ್ತೆ ಪೇಜಾವರ
ಶ್ರೀಗಳ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳುವ ಸಾಧ್ಯತೆಯೂ ಇದೆ ಎಂದೂ ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 