ಕುರುಬ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕಾಗಿ ಕ್ರಮ
Steps taken to construct hostel building for poor talented students of Kuruba community
ಬೆಳಗಾವಿ 29: ಕುರುಬ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಾಗಿ ಅಗತ್ಯವಿರುವ ಜಾಗ ಹಾಗೂ ಕಟ್ಟಡ ನಿರ್ಮಾಣಕ್ಕಾಗಿ ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದ ಭಡಕಲ್ ಗಲ್ಲಿಯಲ್ಲಿರುವ ಗಡ್ಡೆ ಡೆವೆಲಪರ್ಸ್ ಆ್ಯಂಡ್ ಬಿಲ್ಡರ್ಸ್ ಕಚೇರಿಗೆ ಮಂಗಳವಾರ ಆಗಮಿಸಿದಾಗ ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧೀರ ಗಡ್ಡೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಮುಖಂಡರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಆಂಜನೇಯ ನಗರದಲ್ಲಿ ಬೆಳಗಾವಿ ಜಿಲ್ಲಾ ಕುರುಬ ಸಮಾಜದ ಹಾಸ್ಟೆಲ್ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ.
ಈ ಜಾಗ ಮಂಜೂರು ಮಾಡಿ ಈ ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಅಗತ್ಯ ನೆರವು ನೀಡಲಾಗುವುದು. ಹಾಸ್ಟೆಲ್ ನಿರ್ಮಾಣ ಸಂಬಂಧ ಇಲಾಖೆಯಿಂದ ಆಗಬೇಕಾದ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಕುರುಬ ಸಮಾಜದ ಬಡ ವಿದ್ಯಾರ್ಥಿಗಳಿಗೆ ಈ ಹಾಸ್ಟೆಲ್ ಅನುಕೂಲಕರವಾಗಲಿದೆ ಎಂದು ಹೇಳಿದರು.
ಹಾಸ್ಟೆಲ್ ನಿರ್ಮಾಣ ಕಟ್ಟದ ಜತೆಗೆ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಉಂಟಾದ ಅಡೆತಡೆಗಳನ್ನು ಪರಿಹರಿಸಿ ನೆರವು ನೀಡಲಾಗುವುದು. ಕುರುಬ ಸಮಾಜದ ಸಂಘಟನೆಗೆ ಎಲ್ಲರೂ ಕಟಿ ಬದ್ಧರಾಗಬೇಕು. ಸಮಾಜವನ್ನು ಬಲಪಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಜಿಲ್ಲೆಯ ಕುರುಬ ಸಮಾಜದ ಮುಖಂಡರು, ಹಾಸ್ಟೆಲ್ ನಿರ್ಮಾಣ ಸಂಬಂಧ ಜಾಗ ಗುರುತಿಸಿದ್ದು, ತಾಂತ್ರಿಕ ಕಾರಣಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಕುರುಬ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭವ್ಯ ಹಾಸ್ಟೆಲ್ ನಿರ್ಮಿಸಲು ಕ್ರಮ ವಹಿಸುವಂತೆ ಮನವಿ ಮಾಡಿದರು.
ಕರ್ನಾಟಕ ಕುರುಬರ ಸಂಘದ ಕಾರ್ಯಾಧ್ಯಕ್ಷ ಬಸವರಾಜ ಬಸಳಿಗುಂದಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ, ಕುರುಬ ಸಮಾಜದ ಮುಖಂಡ ಸುಧೀರ ಗಡ್ಡೆ, ಜಿಲ್ಲೆಯ ಕುರುಬ ಸಮಾಜದ ಮುಖಂಡರಾದ ವಿನಾಯಕ ಬನ್ನಟ್ಟಿ, ಎಚ್.ಎಸ್. ನಸಲಾಪುರೆ, ಬಾಗಣ್ಣ ನರೋಟಿ, ಗಜಾನನ ಕಾಗಣೇಕರ, ಸೋಮಶೇಖರ ಹಿಟ್ಟಣಗಿ, ರಾಮಕೃಷ್ಣ ರೊಲ್ಲಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.
ಬಳಿಕ ಬೆಳಗಾವಿಯ ನಗರದ ಭಡಕಲ್ ಗಲ್ಲಿಯಲ್ಲಿರುವ ಗಡ್ಡೆ ಡೆವೆಲಪರ್ಸ್ ಆ್ಯಂಡ್ ಬಿಲ್ಡರ್ಸ್ ಕಚೇರಿಗೆ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಕುರುಬ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 