ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ
Steps to improve SSLC results
ಹೂವಿನ ಹಡಗಲಿ 18: ಬರುವ ಮಾರ್ಚ್ ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಮುಖ್ಯ ಗುರುಗಳು ಕ್ರಮ ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿಶನಿವಾರ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಹಾಗೂ ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಫಲಿತಾಂಶ ವಿಶ್ಲೇಷಣೆಗಾಗಿ ಆಯೋಜಿಸಿದ್ದ ಶೈಕ್ಷಣಿಕ ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದರು.ಪೂರ್ವ ಸಿದ್ಧತಾ ಪರೀಕ್ಷೆ 1 ರಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸತತ ಪ್ರಯತ್ನ ಮಾಡಬೇಕು.
ಗಣಿತ ವಿಜ್ಞಾನ ಸಮಾಜ ಐಚ್ಛಿಕ ವಿಷಯಗಳ ಜೊತೆಗೆ ಭಾಷಾ ವಿಷಯಗಳ ಬಗ್ಗೆ ಗಮನ ಹರಿಸಿರಿ ಎಂದರು.ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಸಿ ಸಿ ಕ್ಯಾಮೆರಾ ಕುಡಿಯುವ ನೀರು ಶೌಚಾಲಯ ವಿದ್ಯುತ್ ಸಂಪರ್ಕ ಮೂಲಭೂತ ಸೌಕರ್ಯಗಳ ಸಿದ್ಧತೆ ಮಾಡಿಕೊಳ್ಳಿರಿ ಎಂದರು.ಅವರುಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಯು ಡೈಸ್ ಹಾಗೂ ಅಪಾರ್ ಐಡಿ ಎಸ್ ಎ ಟಿ ಎಸ್,ಇಕೋ ಕ್ಲಬ್ ಕುರಿತು ಮಾಹಿತಿ ಹಂಚಿಕೊಂಡರು.ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ .ತಾ.ಪ್ರೌ. ಮು.ಗು. ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ತಾಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಹಣ್ಣಿ ನರೇಶ್ ಇದ್ದರು.ಶಾಲೆಯ ಮುಖ್ಯ ಗುರುಗಳಾದ ಸುರೇಶ ಅಂಗಡಿ ನಿರ್ವಹಿಸಿದರು.ತಾಲೂಕಿನ ಸರ್ಕಾರಿ ಅನುದಾನಿತ ಪ್ರೌಢಶಾಲೆಗಳ ಮುಖ್ಯ ಗುರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 