ಅಂಬೇಡ್ಕರ ಓಣಿಯಲ್ಲಿ ಕಳ್ಳತನವಾಗಿದ್ದ ಬೈಕ್ ಪತ್ತೆ
Stolen bike found in Ambedkar Oni
ಮುಂಡಗೋಡ 17: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ಮನೆಯ ಮುಂಭಾಗದಲ್ಲಿದ ಬೈಕ ಕಳ್ಳತನ ಮಾಡಿದ ಆರೋಪಿಯನ್ನು ಇಲ್ಲಿಯ ಪೋಲಿಸರು ಶುಕ್ರವಾರ ಪತ್ತೆ ಹಚ್ಚಿದ್ದಾರೆ. ಇಲ್ಲಿಯ ಅಂಬೇಡ್ಕರ್ ಓಣಿಯ ತುಕಾರಾಮ ಭಿಮಣ್ಣ ಕೊರವರ ವಾಸಿಯಾದ ಎಂಬುವವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬೈಕ್ ಕಳುವು ಮಾಡಿಕೊಂಡು ಹೋಗಿದ್ದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕಳ್ಳತನ ಮಾಡಿದ ಬೈಕನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಎಸ್ಪಿ ಎಂ. ನಾರಾಯಣ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಜಿ. ಮತ್ತು ಜಗದೀಶ ನಾಯ್ಕ, ಶಿರಸಿ ಡಿವೈಎಸ್ಪಿ ಗಣೇಶ ಕೆ.ಎಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಂಗನಾಥ ನೀಲಮ್ಮನವರ್, ಕ್ರೈಂ ಪಿಎಸ್‌ಐ ವಿನೋದ ಎಸ್.ಕೆ., ಪಿಎಸ್‌ಐ ಪರಶುರಾಮ ಮಿರ್ಜಿಗಿ, ಎ.ಎಸ್.ಐ ಶಂಕ್ರ್ಪ ರಾಠೋಡ ಹಾಗೂ ಸಿಬ್ಬಂದಿ ಕೋಟೇಶ ನಾಗರವಳ್ಳಿ, ಮಹಾಂತೇಶ ಮುಧೋಳ ಹಾಗೂ ಸಂಜು ರಾಠೋಡ, ತಿರುಪತಿ ಚೌಡಣ್ಣವರ ಹಾಗೂ ಬಸವರಾಜ ಒಡೆಯರ ಕಾರ್ಯಾಚರಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 