ರಾಷ್ಟ್ರೀಯ

ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ, ಸಂಚಾರಕ್ಕೆ ಅಡ್ಡಿ

ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ, ಸಂಚಾರಕ್ಕೆ ಅಡ್ಡಿ

ವಾಶಿಮ್, ನ. 27  ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ವನೋಜಾ ಗ್ರಾಮದ ಬಳಿ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಗುರುವಾರ ರಾತ್ರಿ ಅಪರಿಚಿತರು ಚಲಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಅರ್ಧ ಗಂಟೆಯಿಂದ ಒಂದು ಗಂಟೆಯವರೆಗೆ ಸಂಚಾರಕ್ಕೆ ಅಡ್ಡಿಯಾಯಿತು ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವನೋಜಾ ಸಮೀಪದ 208ನೇ ಟೋಲ್ ಪ್ಲಾಜಾದಿಂದ ಕಾರಂಜಾ ಕಡೆಗೆ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ರಾತ್ರಿ 9.30ರಿಂದ 10 ಗಂಟೆಯ ನಡುವೆ ಈ ಘಟನೆ ನಡೆದಿದೆ. ಕಲ್ಲು ತೂರಾಟದಿಂದ ಆತಂಕಗೊಂಡ ಹಲವು ಚಾಲಕರು ಹೆದ್ದಾರಿಯಲ್ಲೇ ವಾಹನಗಳನ್ನು ನಿಲ್ಲಿಸಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು.

ಮಾಹಿತಿ ಪಡೆದ ಮಂಗ್ರೂಳ್‌ಪೀರ್ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರವನ್ನು ಸುಗಮಗೊಳಿಸಿದರು. ಕಲ್ಲು ತೂರಾಟ ನಡೆಸಿದವರ ಗುರುತು ಮತ್ತು ಕೃತ್ಯದ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸುದ್ದಿ ಓದಿ