ಬೀದಿ ನಾಟಕ ಕಲಾವಿದ ಶಿವಕುಮಾರ ಜಾದವ್ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನ
ರಾಣೆಬೆನ್ನೂರು 08: ಹಾವೇರಿ ಜಿಲ್ಲಾ ಕೇಂದ್ರದ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಇತ್ತೀಚೆಗೆ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಸಮಾರಂಭದಲ್ಲಿ, ಪ್ರತಿ ವರ್ಷ ಜಿಲ್ಲಾಡಳಿತವು ವಿವಿಧ ಕ್ಷೇತ್ರ ಸಾಧಕರಿಗೆ ಕೊಡ ಮಾಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು, ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬೀದಿ ನಾಟಕ- ಜಾನಪದ ಕಲಾವಿದ ಶಿವಕುಮಾರ ಜಾಧವ್ ಅವರಿಗೆ ಸಾರ್ವಜನಿಕವಾಗಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಜವಳಿ -ಸಕ್ಕರೆ ಸಚಿವ ರುದ್ರ್ಪ ಲಮಾಣಿ, ಜಿಲ್ಲಾಧಿಕಾರಿ ಡಾ: ವಿಜಯಮಹಾಂತೇಶ ದಾನಮ್ಮನವರ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ . ಜಿ. ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ್ ಕುಮಾರ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ. ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ. ವಾರ್ತಾ ಮತ್ತು ಪ್ರಸಾರ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಭಜಂತ್ರಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತ ಶಿವಕುಮಾರ ಅವರಿಗೆ ತಾಲೂಕು ಮತ್ತು ಜಿಲ್ಲೆಯ ಅನೇಕ ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳು ಮತ್ತು ಗಣ್ಯರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.