ಬೆಳಗಾವಿ

ಗಡಿಯಲ್ಲಿ ಕನ್ನಡವನ್ನು ಮತ್ತಷ್ಟು ಗಟ್ಟಿಗೊಳಿಸಿ: ನಿಡಸೋಸಿ ಶ್ರೀಗಳು

ಗಡಿಯಲ್ಲಿ ಕನ್ನಡವನ್ನು ಮತ್ತಷ್ಟು ಗಟ್ಟಿಗೊಳಿಸಿ: ನಿಡಸೋಸಿ ಶ್ರೀಗಳು

ಬೆಳಗಾವಿ 16 :  ಗಡಿಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವುದರೊಂದಿಗೆ ಕನ್ನಡಾಭಿಮಾನವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ನಿಡಸೋಸಿ ಸಿದ್ದ ಸಂಸ್ಥಾನಮಠದ ಉತ್ತರಾಧಿಕಾರಿ ಪರಮಪೂಜ್ಯ ಶ್ರೀ ನಿಜಲಿಂಗೇಶ್ವರ ದೇವರು ಹೇಳಿದರು.

ನಗರದಲ್ಲಿ ನಡೆದ 99ನೇ ಬೆಳಗಾವಿ ನಾಡಹಬ್ಬ ಉತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಆಯೋಜಿಸಿದ್ದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷೆ ಅತ್ಯಂತ ಶ್ರೇಷ್ಠವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಕನ್ನಡಾಭಿಮಾನ ಅಪಾರವಾಗಿದೆ. ಕನ್ನಡ ಮಾತನಾಡುವಾಗ ಪ್ರಾದೇಶಿಕ ಪ್ರಭಾವದಿಂದ ಉಚ್ಚಾರಣೆಯಲ್ಲಿ ವ್ಯತ್ಯಾಸವಾಗುವುದು ಸಹಜ.  

ಆದರೆ, ಕನ್ನಡವನ್ನು ಶುದ್ಧವಾಗಿ ಮಾತನಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು.

ಹಿರಿಯ ಸಾಹಿತಿಗಳು ಕನ್ನಡ ಭಾಷೆಯ ಉಳಿವಿಗಾಗಿ ಅಪಾರ ಶ್ರಮ ವಹಿಸಿದ್ದು, ಅವರ ಕೊಡುಗೆಯಿಂದ ಗಡಿಭಾಗದಲ್ಲಿ ಕನ್ನಡ ಗಟ್ಟಿಯಾಗಿ ನೆಲೆ ನಿಂತಿದೆ. ಇಂತಹ ಸಂಸ್ಕಾರಯುತ ಕಾರ್ಯಕ್ರಮಗಳನ್ನು ಪ್ರತಿವರ್ಷ ಆಯೋಜಿಸುವ ಮೂಲಕ ಕನ್ನಡದ ಬೇರನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದರು.


ಸುದ್ದಿ ಓದಿ