ಧಾರವಾಡ - ಹುಬ್ಬಳ್ಳಿ

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ : ಎಸ್‌.ಆರ್‌. ಪಾಟೀಲ್

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ : ಎಸ್‌.ಆರ್‌. ಪಾಟೀಲ್

ಲೋಕದರ್ಶನ ವರದಿ 

       ಧಾರವಾಡ 05:  ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಖರೀದಿ ಮತ್ತು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌.ಪಾಟೀಲ ಅವರು ಹೇಳಿದರು  

        ಅವರು ಇಂದು (ನ.05) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. 

ಗ್ರಾಮಗಳಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿ ಮಾಡುವವರ ಮತ್ತು ಮಾರಾಟ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಫಲಾನುಭವಿಗಳ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು. 

          ಬಡವರಿಗಾಗಿ ಸರ್ಕಾರ ನೀಡುವ ಅನ್ನಭಾಗ್ಯ ಅಕ್ಕಿಯನ್ನು ದುರುಪಯೋಗಪಡಿಸಿಕೊಳ್ಳದೆ, ಅರ್ಹ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಮತ್ತು ಸರ್ಕಾರದ ನಿಯಮಾನುಸಾರ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಗತ್ಯ ಮಾಹಿತಿಯುಳ್ಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.  

ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ​‍್ಕವಾಗಿ ತಲುಪುವಂತೆ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಅವರು ಮಾತನಾಡಿ, ಕಾರ್ಮಿಕ ಇಲಾಖೆಗೆ ಈ ಹಿಂದೆ ಇ-ಶ್ರಮ ಕಾರ್ಡ್‌ ಕೋರಿ ಅರ್ಜಿ ಸಲ್ಲಿಸಿದವರಿಗೆ ಇ-ಶ್ರಮ ಕಾರ್ಡ್‌ ವಿತರಿಸಲಾಗಿದೆ. ಬಾಕಿ ಉಳಿದ ಅರ್ಜಿಗಳ ಕುರಿತು ವಿಚಾರಣೆಗೆ ಕಾರ್ಮಿಕ ಇಲಾಖೆಗೆ ಸಂಪರ್ಕಿಸಲು ಸೂಚಿಸಿರುತ್ತಾರೆ.  

           ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ನಿರುದ್ಯೋಗಿ ಯುವಕರಿಗೆ ಮೂರು ತಿಂಗಳ ತರಬೇತಿ ನೀಡಲು ಅಗತ್ಯ ವೇಳಾಪಟ್ಟಿ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.  

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ: ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ 14,155  ಅರ್ಜಿಗಳು ಸ್ವೀಕೃತವಾಗಿದ್ದು, ಡಿ.ಬಿ.ಟಿ ಮೂಲಕ 12,340 ಫಲಾನುಭವಿಗಳಿಗೆ ಸಹಾಯಧನ ಜಮೆಯಾಗಿದೆ. ಇಲ್ಲಿಯವರೆಗೆ ಜಿಲ್ಲೆಯ ಯುವನಿಧಿ ಫಲಾನುಭವಿಗಳಿಗೆ ರೂ.38,33,41,500 ಸಹಾಯಧನ ಜಮೆ ಆಗಿದೆ. 


ಸುದ್ದಿ ಓದಿ