ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯ ಕಟ್ಟುನಿಟ್ಟು ನಿಯಂತ್ರಣ: ಎಸ್ಪಿ
Strict control over illegal lottery and matka scam: SP
ಕಾರವಾರ, ಆ.12 :- ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕಾ-್ವಡ್‌ನ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 86 ಮಟ್ಕಾ ಪ್ರಕರಣಗಳಲ್ಲಿ 101 ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೈಯಿಂಗ್ ಸ್ಕಾ-್ವಡ್‌ನ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕು. ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವತಿಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ ಅಹ್ಮದ ಮುಲ್ಲಾ, ಎ.ಎಸ್.ಪಿ ಕೃಷ್ಣಮೂರ್ತಿ, ವಾಣಿಜ್ಯ ತೆರಿಗೆ ಅಧಿಕಾರಿ ಷಣ್ಮುಗಪ್ಪ ನರೇಗಲ್, ಪ್ಲೈಯಿಂಗ್ ಸ್ಕಾ-್ವಡ್‌ನ ಸದಸ್ಯ ಸಮಾವೇಶಕ ಹಾಗೂ ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಪಟಗಾರ, ಅಭಿವೃದ್ಧಿ ಅಧಿಕಾರಿ ಕಾಶಿಮಸಾಬ ಮುಲ್ಲಾ, ಶೋಲಿನ್ ಡಿ ಕೋಸ್ಟಾ, ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 