ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

ವಿಜಯಪುರ ಜೂನ್ 03 : ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಹೊರ ರಾಜ್ಯಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಹಾಗೂ ಹೋಮ್ ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಗಡಿಭಾಗದಲ್ಲಿ ಚೆಕ್ಪೋಸ್ಟ್ಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ಕ್ವಾರಂಟೈನ್ ಕೇಂದ್ರಗಳ ಹಾಗೂ ಹೋಮ್ ಕ್ವಾರಂಟೈನ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕಂಟೇನ್ಮೆಂಟ್ ವಲಯಗಳ ಸೂಕ್ತ ನಿರ್ವಹಣೆಯಾಗಬೇಕು. ಕೋವಿಡ್-19 ಸಂಬಂಧಿಸಿದಂತೆ ಯಾವುದೇ ಲೋಪದೋಷಗಳಾಗದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

  ಎನ್.ಆರ್.ಇ.ಜಿ.ಎ ಯೋಜನೆಯಡಿ ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಕಾಮರ್ಿಕರಿಗೆ ಉದ್ಯೋಗ ಕಲ್ಪಿಸುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರೈತರಿಗೆ ಮುಂಗಾರು ಸಂದರ್ಭದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅದರಂತೆ ರೈತರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಡಿಎಪಿ, ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ವಿತರಣೆಯಾಗಬೇಕು. ರೈತರಿಗೆ ಯಾವುದೇ ತೊಂದರೆಗಳಾಗದಂತೆ ಕಾರ್ಯನಿರ್ವಹಿಸಬೇಕು ಎಂದರು.

ತೋಟಗಾರಿಕೆಯ ಹೂವು ಬೆಳೆಗಾರರು, ಹಣ್ಣು ತರಕಾರಿ ಬೆಳೆಗಾರರಿಗೆ ಸಕರ್ಾರಿ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರ ಧನ ಕಲ್ಪಿಸಬೇಕು. ಮದುವೆಗಳಿಗಾಗಿ ಮಂಗಲಕಾಯರ್ಾಲಯಗಳನ್ನು ಕಾಯ್ದಿರಿಸಿ, ಲಾಕ್ಡೌನ್ದಿಂದ ಸಮಸ್ಯೆ ಎದುರಿಸುತ್ತಿರುವ ಮತ್ತು ಠೇವಣಿ ಹಣ ನೀಡಿರುವವರಿಗೆ ಮರಳಿ ಹಣ ದೊರಕಿಸಿ ಕೊಡುವುದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 22 ಕಂಟೇನ್ಮೆಂಟ್ ವಲಯಗಳನ್ನು ನಿಮರ್ಿಸಲಾಗಿದ್ದು, 5 ಕಂಟೇನ್ಮೆಂಟ್ ವಲಯಗಳು ರದ್ಧತಿಯಾಗಿವೆ. ಸದ್ಯಕ್ಕೆ 17 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿದ್ದು ಇವುಗಳ ಮೇಲೆ ಪೂತರ್ಿ ನಿಗಾ ಇಡಲಾಗಿದೆ. ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿರುವ ವಲಸೆ ಕಾಮರ್ಿಕರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 576 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿದ್ದು, ಈ ಕ್ವಾರಂಟೈನ್ ಕೇಂದ್ರಗಳಲ್ಲಿ ಒಟ್ಟು 26324 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, 23834 ಜನರು ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದು, ಹೋಮ್ ಕ್ವಾರಂಟೈನ್ ಮಾಡಿ ನಿಗಾ ಇಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ 133 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿದ್ದು, ಈ ಕ್ವಾರಂಟೈನ್ ಕೇಂದ್ರಗಳಲ್ಲಿ 2503 ಜನರನ್ನು ನಿಗಾ ಇಡಲಾಗಿದೆ ಎಂದರು.ಜಿಲ್ಲೆಗೆ ಮಹಾರಾಷ್ಟ್ರ ರಾಜ್ಯದಿಂದ ಈವರೆಗೆ 21113 ಜನ ವಲಸಿಗರು ಆಗಮಿಸಿದ್ದು, ಈವರೆಗೆ 21015 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇವುಗಳಲ್ಲಿ 16514 ಜನರ ವರದಿ ನೆಗೆಟಿವ್ ಬಂದಿದ್ದು, 69 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇನ್ನೂ 4432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ. ಜಿಲ್ಲೆಗೆ ಮಹಾರಾಷ್ಟ್ರದಿಂದ 21113, ಗೋವಾ ರಾಜ್ಯದಿಂದ 2982, ಅನ್ಯ ರಾಜ್ಯಗಳಿಂದ 6676 ಜನರು ಆಗಮಿಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ ಆಗಮಿಸಿದ 27,384 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 127 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. 7458 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 19863 ಜನರು (1 ರಿಂದ 28 ದಿನಗಳ) ರಿಪೋಟರ್ಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 5 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 58 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 64 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ.

   ಈವರೆಗೆ 24511 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 19952 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 4432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದರು.ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಸಾಸನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ  ಹಷರ್ಾ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಹೇಂದ್ರ ಕಾಪ್ಸೆ, ಕೃಷಿ ಜಂಟಿ ನಿದರ್ೇಶಕ ಶಿವಕುಮಾರ್, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ ಮೋಹನ್ಕುಮಾರಿ ಸೇರಿದಂತೆ ಇತರರಿದ್ದರು.