ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ : ದೇವೇಂದ್ರಪ್ಪ
ಹೂವಿನಹಡಗಲಿ 16: ಇದೀಗ ಬರುವ ಸ್ಥಳೀಯ ಪಂಚಾಯ್ತಿ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವಿಗೆ ಪ್ರತಿಯೊಬ್ಬರು ಪಕ್ಷ ಸಂಘಟನೆ ಮೂಲಕ ಶ್ರಮಿಸಬೇಕು ಎಂದು ಸಂಸದ ದೇವೇಂದ್ರಪ್ಪ ಹೇಳಿದರು.
ಪಟ್ಟಣದ ಸೇವಾಲಾಲ್ ಭವನದಲ್ಲಿ ಸೋಮವಾರ ಎಸ್.ಸಿ.ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಕಳೆದ 10ವರ್ಷದಿಂದ ಬಿಜೆಪಿ ಈ ಭಾಗದಲ್ಲಿ ಅಧಿಕಾರವಿಲ್ಲ ಈ ಬಾರಿ ಕೇಂದ್ರ-ರಾಜ್ಯ ಸರ್ಕಾರ ಜನಪರ ಯೋಜನೆಗಳ ಮಾಹಿತಿ ನೀಡುವ ಮೂಲಕ ಪಕ್ಷವನ್ನು ಸಂಘಟಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ಬರಲು ಎಲ್ಲರೂ ಪ್ರಯತ್ನ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ ಮಾತನಾಡಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಬೂತಮಟ್ಟದಲ್ಲಿ ಕನಿಷ್ಠ 10ಜನ ಎಸ್.ಸಿ.ಮೋರ್ಚಾ ಕಾರ್ಯಕರ್ತರು ಬೇಕು ಎಂದರು. ಮಾಜಿ ಶಾಸಕ ಬಿ.ಚಂದ್ರನಾಯ್ಕ ಮಾತನಾಡಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಸಿಗಲಿ ಅಭ್ಯರ್ಥಿ ಗೆಲುವಿಗೆ ಪ್ರತಿಯೊಬ್ಬರು ಹೋರಾಟ ಮಾಡಬೇಕಿದೆ ಎಂದರು. ಎಸ್.ಸಿ.ಮೋರ್ಚಾ ಅಧ್ಯಕ್ಷ ಕೆ.ಹೆಚ್.ಮಲ್ಲಿಕಾರ್ಜುನ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸಂಜೀವರೆಡ್ಡಿ, ಮಾಜಿ ಅಧ್ಯಕ್ಷ ಎಂ.ಬಿ.ಬಸವರಾಜ, ಪ್ರಧಾನ ಕಾರ್ಯದರ್ಶಿ ಹೆಚ್.ಪೂಜಪ್ಪ,ಕೊಟ್ರೇಶ ನಾಯ್ಕ ಹಾಗೂ ಎಸ್.ಸಿ.ಮೋರ್ಚಾದ ನೂರಾರು ಕಾರ್ಯಕರ್ತರು.ಪಕ್ಷದ ಮುಖಂಡರು ಭಾಗವಹಿಸಿದ್ದರು.