ಕಾಗವಾಡ

ನರೇಗಾ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ: ಅಡವಿಮಠ ಸೂಚನೆ

ನರೇಗಾ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ: ಅಡವಿಮಠ ಸೂಚನೆ

ಕಾಗವಾಡ 23: ತಾಲೂಕಿನ ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿಯಲ್ಲಿ ಬಾಕಿ ಇರುವ ತೆರಿಗೆ ಸಂಗ್ರಹಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ನರೇಗಾ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಜಿ.ಪಂ. ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಅವರು, ಸೋಮವಾರ ದಿ. 23 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಕಳೆದ ಸಭೆಯಲ್ಲಿ ತೆರಿಗೆ ಸಂಗ್ರಹಣೆಯ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಈಗ ತೆರಿಗೆ ಸಂಗ್ರಹಣೆಯಲ್ಲಿ ಪ್ರಗತಿಯಾಗಿದ್ದು, ಒಂದೆರಡು ಗ್ರಾಮ ಪಂಚಾಯತಿಗಳು ಮಾತ್ರ ಇನ್ನೂ ತೆರಿಗೆ ಸಂಗ್ರಹವನ್ನು ಬಾಕಿ ಉಳಿಸಿಕೊಂಡಿವೆ. ಅವರಿಗೆ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಲಾಗಿದೆ. ರಾಜ್ಯ ಸರ್ಕಾರ ಕಳೆದ ವರ್ಷದ ಖರ್ಚು ವೆಚ್ಚಗಳ ಅನುಗುಣವಾಗಿ ಈ ವರ್ಷದ ಕ್ರೀಯಾ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಯೋಜನೆಗಳು ಸಮರ​‍್ಕವಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು. 

ಪಿಡಿಒಗಳು ನರೇಗಾ ಯೋಜನೆಯಲ್ಲಿ ಹೆಚ್ಚು ಕೆಲಸಗಳ ಕ್ರೀಯಾ ಯೋಜನೆ ಸಿದ್ದಪಡಿಸಿ, ಕೂಲಿ ಕಾರ್ಮಿಕ ಜನರಿಗೆ ಕೆಲಸಗಳನ್ನು ನೀಡಬೇಕು. ಅವಧಿಯಲ್ಲಿ ಕೂಲಿ ಹಣ ಪಾವತಿಯಾಗುವಂತೆ ನಿಗಾ ವಹಿಸಬೇಕು ಇದರಲ್ಲಿ ನಿರ್ಲಕ್ಷ್ಯ ತೋರಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. 

ತಾ.ಪಂ. ಎಇಒ ವೀರಣ್ಣಾ ವಾಲಿ, ಸಿಡಿಪಿಓ ಸಂಜೀವಕುಮಾರ ಸದಲಗಿ, ರವೀಂದ್ರ ಮುರಗಾಲಿ, ಡಾ. ಬಸಗೌಡಾ ಕಾಗೆ, ಬಿ.ಜೆ. ಕಾಂಬಳೆ, ದುರ್ಯೋಧನ ಮಾಳಿ, ಬಸವರಾಜ ಯಾದವಾಡ, ಪ್ರಶಾಂತ ಗಂಗಧರ, ಮೈಬೂಬ ಕೊತ್ವಾಲ, ಎ.ಡಿ. ಅನ್ಸಾರಿ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ