2ಎ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ : ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ: ತಾಲೂಕು ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ
ಲೋಕದರ್ಶನ ವರದಿ
ಬೈಲಹೊಂಗಲ 17: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಅಧಿವೇಶನದಲ್ಲಿ ಕೊಟ್ಟ ಮಾತಿನಂತೆ ಮೀಸಲಾತಿ ನೀಡದಿದ್ದರೆ ಮೇ.23 ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿಯ ಮನೆಯಿಂದಲೇ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಇದು ಪಂಚಮಸಾಲಿ 2ಎ ಮಿಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟವಾಗಲಿದೆ' ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕು ಘಟಕದಿಂದ 2ಎ ಮೀಸಲಾತಿಗೆ ಒತ್ತಾಯಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಅವರು ಮಾತನಾಡಿ ಸರ್ಕಾರ ಸಮಾಜದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಿಷ್ಯಕಾಳಜಿ ಮಾಡಿದರೆ ಬರುವ ದಿನಮಾನಗಳಲ್ಲಿ ಸಮಾಜದ ಜನರು ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಾಲಹರಣ ಮಾಡದೆ ಸಮಾಜದ ಬೇಡಿಕೆಯಾಗಿರುವ ‘2ಎ' ಮೀಸಲಾತಿ ನೀಡಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲ ಬೋಳನ್ನವರ, ಮಹಾಂತೇಶ ತುರಮರಿ, ಶಂಕರ ಮಾಡಲಗಿ, ಎಫ್.ಎಸ್.ಸಿದ್ದನಗೌಡರ, ಪಂಚನಗೌಡ ದ್ಯಾಮನಗೌಡರ, ರೋಹಿಣಿ ಬಾಬಾಸಾಹೇಬ ಪಾಟೀಲ, ಗೀತಾಂಜಲಿ ಮಾತನಾಡಿದರು.
ಮಿನಿ ವಿಧಾನಸೌಧದಲ್ಲಿರುವ ಬಸವೇಶ್ವರ ಮೂರ್ತಿ, ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮಮೂರ್ತಿಗೆ ಮಾಲಾರೆ್ಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆ ಇಂಚಲ ಕ್ರಾಸ್, ಎಪಿಎಂಸಿ ಗಣೇಶ ದೇವಸ್ಥಾನ, ಬಸ್ ನಿಲ್ಸಾಣ , ರಾಯಣ್ಣ ವೃತ್ತ, ಮೂಲಕ ಎಸಿ ಕಚೇರಿ ತಲುಪಿತು.
ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಮಾಜಿ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಸೋಮೇಶ್ವರ ಕಾರ್ಖಾನೆ ಉಪಾಧ್ಯಕ್ಷ ರಾಜು ಕುಡಸೋಮಣ್ಣವರ, ಮುಖಂಡರಾದ ಮಹೇಶ ಹರಕುಣಿ, ಮುರುಗೇಶ ಗುಂಡ್ಲೂರ, ಶ್ರೀಶೈಲ ಯಡಳ್ಳಿ, ಮಹಾಂತೇಶ ಮತ್ತಿಕೊಪ್ಪ, ಎಂ.ವಾಯ್,ಸೋಮನ್ನವರ, ರಾಜಶೇಖರ ಮೂಗಿ, ವಿರೇಶ ಹಲಕಿ, ಗಂಗಾಧರ ಹುಲಕುಂದ, ಶ್ರೀಶೈಲ ಶರಣಪ್ಪನವರ, ಸಂಜೀವಗೌಡರ ಫಾಟೀಲ, ಆರ್.ಕೆ.ಪಾಟೀಲ,ಪಿರಗೋಜಿ, ಈರಣ್ಣಾ ಬೇಟಗೇರಿ, ಮಹಾಂತೇಶ ಗುಂಡ್ಲೂರ, ಎಸ್.ಬಿ.ಸಂಗನಗೌಡರ ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಪಂಚಮಸಾಲಿ ಬಾಂಧವರು ಇದ್ದರು.