ವಿದ್ಯಾರ್ಥಿ ಮಲ್ಲೇಶ ರಾಜ್ಯಮಟ್ಟಕ್ಕೆ ಆಯ್ಕೆ
ಹುನಗುಂದ 16: ರಬಕವಿಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ನಗರದ ವಿ.ಎಂ.ಎಸ್.ಆರ್.ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಮಲ್ಲೇಶ ಬಸವರಾಜ ಮಾದರ ಇವರು 57-61 ತೂಕದ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಕ್ರೀಡಾ ನಿರ್ದೇಶಕ ಎಸ್.ಬಿ.ಚಳಗೇರಿ ತಿಳಿಸಿದ್ದಾರೆ. ಈ ಸಾಧಕ ವಿದ್ಯಾರ್ಥಿಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಎಚ್.ಎಸ್.ಬೋಳಿಶೆಟ್ಟರ, ಹಾಗೂ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.