ಧಾರವಾಡ - ಹುಬ್ಬಳ್ಳಿ

ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮ

ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮ


 ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮ  

ಧಾರವಾಡ 25: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಧಾರವಾಡ  ಜಿಲ್ಲಾ ಆಯುಷ್ ಇಲಾಖೆ ಧಾರವಾಡ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಆಯುಷ್ ನಿರ್ದೇಶನಾಲಯ ಬೆಂಗಳೂರು ಮಾರ್ಗಸೂಚಿಗಳನುಸಾರ ಆಯುಷ್ ಇಲಾಖೆಯ 2024-25 ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಉಪಯೋಜನೆ ಅಡಿ (ಖಅಖಕ / ಖಿಖಕ) ಅಡಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.  

ಕಾರ್ಯಕ್ರಮವನ್ನು ಧಾರವಾಡ ತಾಲೂಕಿನ ತಿಮ್ಮಾಪೂರ ಸರ್ಕಾರಿ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಿ. 25ರಂದು ಬೆಳಿಗ್ಗೆ 10ಗಂಟೆಗೆ ಉಚಿತ ಆಯುಷ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶಕ್ತಿವರ್ಧಕ ಖರ್ಜುರ ಪಾನಕ ಹಾಗೂ ಸಾಮಾನ್ಯ ವೈದ್ಯಕೀಯ ತಪಾಸಣೆ ಶಿಬಿರವನ್ನು ಹಮ್ಮಿ ಕೊಂಡು ಆಯುಷ್ ಇಲಾಖೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಆಯುಷ್ ಕೈಪಿಡಿಯನ್ನು ನೀಡಿ ತಮ್ಮ ದಿನನಿತ್ಯ ಜೀವನದಲ್ಲಿ ಆಯುರ್ವೇದ ವೈದ್ಯ  ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಆರೋಗ್ಯ ಹೊಂದಲು ತಿಳಿಸಲಾಯಿತು.   

ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಕಬಾಡೆ ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಚಟಕ್ಕೆ ದಾಸರಾಗುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಿ ನಿಮ್ಮ ಪೋಷಕರು ಮಕ್ಕಳ ಬಗೆಗಿನ ಕನಸುಗಳನ್ನು ಸಾಕಾರಗಳಿಸುವಲ್ಲಿ ಶ್ರಮಿಸಬೇಕು ಹಾಗೂ ನಿಮ್ಮ ಏಳಿಗೆಗೆ ನೀವೇ ಶಿಲ್ಪಿಗಳು ಎಂಬುದನ್ನು ಅರಿತು ಬಾಲ್ಯ ಜೀವನದಿಂದಲೇ ಸಮಯಪಾಲನೆಯೊಂದಿಗೆ ಚನ್ನಾಗಿ ವಿದ್ಯಾಭ್ಯಾಸ ಮಾಡಿ ಶಾಲೆಗೆ ಕೀರ್ತಿ ತಂದು ಉತ್ತಮ ಪ್ರಜೆಯಾಗಿ ಹೊರಹೊಮ್ಮಬೇಕೆಂದು ಆಶಯ ವ್ಯಕ್ತಪಡಿಸಿದರು.   

ಆಯುಷ್ ವೈದ್ಯಾಧಿಕಾರಿ ಡಾ. ಸವಿತಾ ಹುಣಶಿಮರದ ಅರಿವು, ಓಷಧಿ ಸಸ್ಯಗಳ ಪರಿಚಯ ಮತ್ತು ಉಪಯೋಗ, ಹದಿಹರೆಯದ ಆರೋಗ್ಯದ ಕುರಿತು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.   

ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ. ಸವಿತಾ ಹುಣಶಿಮರದ, ಡಾ. ಶಂಕರ ಕೊಟ್ರಿ ಹಾಸ್ಟೇಲ್ ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣೆ ಮಾಡಿ ಉಚಿತ ಓಷಧಿಯನ್ನು ವಿತರಿಸಲಾಯಿತು. ಲಕ್ಷ್ಮಣ ಮಕದಂ ವಿದ್ಯಾರ್ಥಿನಿಯರಿಗೆ ಯೋಗ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಪ್ರಯುಕ್ತ ಇನ್ನು ನಿರಂತರ 2 ತಿಂಗಳ ಕಾಲಅಂದರೆ ಡಿಸೆಂಬರ್‌-2024ರ ಅಂತ್ಯದವರೆಗೆ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಉಚಿತ ಯೋಗಾಭ್ಯಾಸ ಆಯೋಜಿಸಲಾಗುತ್ತಿದ್ದು, ಎಲ್ಲ  250 ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಲಾಯಿತು.  

ಅದರಂತೆ ನಿಲಯ ಪಾಲಕರಾದ ಗೀತಾ ಚಕಾರಿ  ಮತ್ತು  ಆಯುಷ್ ಇಲಾಖೆಯ ಸಿಬ್ಬಂದಿಯವರು,  ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. 


ಸುದ್ದಿ ಓದಿ