ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು Student dies after falling into a well

 ಜಮಖಂಡಿ 07: ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಸುಹಾಸ ಲಕ್ಷ್ಮಣ ಕುಳಲಿ (17) ಎಂಬ ವಿದ್ಯಾರ್ಥಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ಜಮಖಂಡಿಯ ಬಿ.ಎಲ್‌.ಡಿ.ಇ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ಸುಹಾಸ, ಕಾಲೇಜಿನ ವಸತಿ ನಿಲಯದಲ್ಲಿ ವಾಸವಾಗಿದ್ದನು.  ನಗರದ ಹೈದರ್ ಎಂಬುವರಿಗೆ ಸೇರಿದ ಬಾವಿಯಲ್ಲಿ ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದರು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.  ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.