ಬಸ್ ವಿಳಂಬ ಖಂಡಿಸಿ ಮಳೆಯಲ್ಲೇ ವಿದ್ಯಾರ್ಥಿನಿಯರ ಪ್ರತಿಭಟನೆ
Student protest in the rain, condemning bus delays
ಲಕ್ಷ್ಮೇಶ್ವರ 29: ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಂದ್ರಳ್ಳಿ ತಾಂಡಾಕ್ಕೆ ಪ್ರತಿದಿನ ಸಂಜೆ 4.30ಕ್ಕೆ ಹೊರಡಬೇಕಿದ್ದ ಬಸ್ ಸಂಜೆ 5.30 ಆದರೂ ಬಿಡದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ ನಡೆಸಿದರು. ಕಳೆದ ಒಂದು ವಾರದಿಂದ ನಿಗದಿತ ಸಮಯಕ್ಕೆ ಬಸ್ ಸಂಚರಿಸುತ್ತಿಲ್ಲ. ಇದರಿಂದ ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದ ವಿದ್ಯಾರ್ಥಿನಿಯರು ಜಿಟಿ-ಜಿಟಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ತಮ್ಮ ಪುಸ್ತಕದ ಬ್ಯಾಗ್ಗಳನ್ನು ರಸ್ತೆಯ ಮೇಲೆ ಇಟ್ಟು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕ್ರೈಂ ಪಿಎಸ್ಐ ಟಿ.ಕೆ. ರಾಠೋಡ್ ಹಾಗೂ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ಸಮಾಧಾನಪಡಿಸಿದರು. ಬಳಿಕ ಸಾರಿಗೆ ಘಟಕದ ಅಧಿಕಾರಿಗಳೊಂದಿಗೆ ಚರ್ಚಿಸಿ, ಇನ್ನು ಮುಂದೆ ನಿಗದಿತ ಸಮಯಕ್ಕೆ ಬಸ್ ಬಿಡುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯ ನಂತರ ವಿದ್ಯಾರ್ಥಿನಿಯರು ಪ್ರತಿಭಟನೆ ಹಿಂತೆಗೆದುಕೊಂಡಿದ್ದು, ಬಸ್ ಅನ್ನು ಕುಂದ್ರಳ್ಳಿ ತಾಂಡಾ ಮಾರ್ಗಕ್ಕೆ ಬಿಡಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 