ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ವಿದ್ಯಾರ್ಥಿ ಆಯ್ಕೆ
ಲೋಕದರ್ಶನ ವರದಿ
ಹಾರೂಗೇರಿ 02: ಪಟ್ಟಣದ ಜನತಾ ಶಿಕ್ಷಣ ಸಂಸ್ಥೆಯ ಭಗವಾನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪುಟ್ಟರಾಜ ಸುರೇಶ್ ಚೌಗುಲೆ ಅವರು ಮೂಡಲಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಇಲಾಖಾ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಬಿ.ಬಿ. ಕರ್ಣವಾಡಿ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಜೆ. ನಲವಡೆ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.