ರಾಜ್ಯ ಮಟ್ಟದ ಅಂತರ ಶಾಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ
Students' performance in state-level inter-school competition
ಬೆಳಗಾವಿ 26: ಭಾರತ ವಿಕಾಸ ಪರಿಷತ್ ವತಿಯಿಂದ ರಾಯಚೂರುನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ ಶಾಲಾ ಸಮೂಹಗಾಯನ ಸ್ಪರ್ಧೆಯಲ್ಲಿ ಲವ್ ಡೇಲ್ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು, ಅವರು ತಿರುಪತಿಯಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.
ಇದಕ್ಕೂ ಮೊದಲು, ಬೆಳಗಾವಿಯಲ್ಲಿ ನಡೆದ ಶಾಖಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅವರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಸಮೂಹನಲ್ಲಿ ರಿಷಿಕಾ ಕೊಂಗವಾಡ, ಅದಿತಿ ಉಂಗೇರ್, ಆಕಾಂಕ್ಷಾ ನಾಯಕ್, ರಾಘವಿ ಗಸ್ತಿ, ಅದ್ವಿತಿ ಶೇಟ್, ತ್ರಿಶಾನಾ ಮಿತ್ರಾ, ಲೈಬಾಹ ಕೆ., ಹೃತ್ವಿಕಾ ಕಂಗ್ರಾಳಕರ ಇದ್ದರು.ಅವರಿಗೆ ಸಂಗೀತ ಶಿಕ್ಷಕ ವಿನಾಯಕ ಮೋರೆ ಮಾರ್ಗದರ್ಶನ ನೀಡಿದ್ದರು. ವಿಜೇತರನ್ನು ಲವ್ ಡೇಲ್ ಶಾಲೆಯ ಪ್ರಾಚಾರ್ಯೆ ಲಕ್ಷ್ಮಿ ಇಂಚಲ ಅಭಿನಂದಿಸಿ ಸನ್ಮಾನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 