ಸಂಗೀತ, ನೃತ್ಯದೊಂದಿಗೆ ರಂಗಪ್ರದರ್ಶನದಿಂದ ವಿದ್ಯಾರ್ಥಿಗಳ ಪ್ರತಿಭೆ ವಿಕಸನ: ಡಾ. ಶಾಂತಾರಾಮ ಹೆಗಡೆ
Students' talent blossoms through stage performances featuring music and dance: Dr. Shantharam Hegde
ಲೋಕದರ್ಶನ ವರದಿ
ಧಾರವಾಡ 06: ಸಂಗೀತ ಮತ್ತು ನೃತ್ಯದ ನಿರಂತರ ಅಭ್ಯಾಸದ ಜತೆಗೆ ರಂಗಪ್ರದರ್ಶನದ ಅವಕಾಶ ದೊರೆತಾಗ ವಿದ್ಯಾರ್ಥಿಗಳು ಹೆಚ್ಚು ಪರಿಣತರಾಗಲು ಸಾಧ್ಯ ಎಂದು ಕವಿವಿ ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ, ಹಿಂದೂಸ್ತಾನಿ ಗಾಯಕ ಡಾ. ಶಾಂತಾರಾಮ ಹೆಗಡೆ ಹೇಳಿದರು. ನಗರದ ಡಾ. ದ.ರಾ. ಬೇಂದ್ರೆ ಭವನದಲ್ಲಿ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿ ನೃತ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಭರತನಾಟ್ಯವು ಪ್ರಾಚೀನ ಕಲೆಯಾಗಿದ್ದು, ನೃತ್ಯ, ಸಂಗೀತ ಹಾಗೂ ಭಾವಾಭಿವ್ಯಕ್ತಿಯ ಸಮನ್ವಯವನ್ನು ಒಳಗೊಂಡಿದೆ.
ವಿದ್ಯಾರ್ಥಿಗಳಿಗೆ ನಿರಂತರ ಅಭ್ಯಾಸದ ಜತೆಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಇದರಿಂದ ಅವರ ಪ್ರತಿಭೆ ಮತ್ತಷ್ಟು ಬೆಳೆಯುತ್ತದೆ ಎಂದರು. ಸಂಸ್ಕಾರ ಭಾರತಿಯ ಕರ್ನಾಟಕ ಉತ್ತರ ಪ್ರಧಾನ ಕಾರ್ಯದರ್ಶಿ ಡಾ. ಶಶಿಧರ ನರೇಂದ್ರ ಮಾತನಾಡಿ, ಕೃಷ್ಣಾಷ್ಟಮಿ ಕೇವಲ ಆಚರಣೆಯಲ್ಲ; ಅದು ಭಾರತೀಯ ಜೀವನಶೈಲಿ ಮತ್ತು ಸಂಸ್ಕಾರದ ಪ್ರತೀಕವಾಗಿದೆ. ನೃತ್ಯೋತ್ಸವದ ಮೂಲಕ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಬೆಳೆಸಬೇಕು ಎಂದರು. ಭಾರತ ನೃತ್ಯ ಅಕಾಡೆಮಿ ಅಧ್ಯಕ್ಷ ವಿದ್ವಾನ್ ರಾಜೇಂದ್ರ ಟೊಣಪಿ ಮಾತನಾಡಿದರು. ಯುವ ಕಲಾವಿದರು ಗಣೇಶ ವಂದನೆ, ಕೃಷ್ಣಾಷ್ಟಕಂ, ಕಾಳಿಂಗ ನೃತ್ಯ ಸೇರಿದಂತೆ ವಿವಿಧ ನೃತ್ಯಗಳನ್ನು ಪ್ರದರ್ಶಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 