ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ
Students' talent showcased in art competition
ಗದಗ, ಸೆ. 29: ಕೆ.ಎಲ್.ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಗದಗದ ಎನ್‌ಎಸ್‌ಎಸ್ ಘಟಕದ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿತ್ರಕಲಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಣಗಿನಹಾಳದ ವಸತಿ ಶಾಲೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರು, ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.
ಕೆ.ಎಲ್.ಇ. ಸಂಸ್ಥೆಯು ನಮ್ಮ ಶಾಲೆಯನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಮಚಂದ್ರ ಪಡೇಸೂರ, ವಿದ್ಯಾರ್ಥಿಗಳಲ್ಲಿ ಪ್ರಕೃತಿ ಸಂರಕ್ಷಣೆ ಹಾಗೂ ಸ್ವಚ್ಛ ಭಾರತದ ಪರಿಕಲ್ಪನೆ ಕುರಿತು ಜಾಗೃತಿ ಮೂಡಿಸುವಲ್ಲಿ ಇಂತಹ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಚಿತ್ರಕಲಾ ಸ್ಪರ್ಧೆಯಲ್ಲಿ ‘ನಶಾಮುಕ್ತ ಭಾರತ’ ವಿಷಯದ ಕುರಿತು ಚಿತ್ರ ಬಿಡಿಸಿ ಪ್ರಶಸ್ತಿ ಪಡೆದ ಕುಮಾರಿ ವೇದಾ ಮಾಳಗಿಮನಿ, ಕುಮಾರಿ ವಂದನಾ ಭಜಂತ್ರಿ ಹಾಗೂ ಕುಮಾರಿ ದ್ರಾಕ್ಷಾಯಿಣಿ ಅವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 