ವಿದ್ಯಾರ್ಥಿಗಳ ಸಮವಸ್ತ್ರ ಶಾಲೆಯ ಮುಖ್ಯ ಗುರುಗಳಿಗೆ ಹಸ್ತಾಂತರ
Students' uniforms handed over to school principals
ಲೋಕದರ್ಶನ ವರದಿ
ಕಂಪ್ಲಿ 29: ತಾಲ್ಲೂಕಿನ ಎಮ್ಮಿಗನೂರು ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿದ್ಯಾರ್ಥಿಗಳ ಸಮವಸ್ತ್ರಗಳನ್ನು ಸಮೂಹ ಸಂಪನ್ಮೂಲ ವ್ಯಕ್ತಿ ಸ್ವಯಂಪ್ರಭ ಇತ್ತೀಚೆಗೆ ವಿತರಿಸಿದರು. ಸರ್ಕಾರವು ಶಾಲೆಗಳ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಣೆ ಮಾಡಲಾಗುವುದು ಎಂದುತಿಳಿಸಿದ ಪ್ರಕಾರವೇ ಈಗಾಗಲೇ ಎಲ್ಲಾ ಸಂಪನ್ಮೂಲ ಕೇಂದ್ರಗಳಿಗೆ ಸಮವಸ್ತ್ರಗಳನ್ನು ಪೂರೈಕೆ ಮಾಡಲಾಗಿದ್ದು, ಸಂಪನ್ಮೂಲ ಕೇಂದ್ರಗಳಿಂದ ವಿವಿಧ ಶಾಲೆಗಳಿಗೆ ಸಮವಸ್ತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಎಮ್ಮಿಗನೂರು ಕ್ಲಸ್ಟರ್ ಮಟ್ಟದ 15 ಶಾಲೆಗಳ ನೂರಾರು ವಿದ್ಯಾರ್ಥಿಗಳಿಗೆ ಮೊದಲ ಹಂತದ ಒಂದು ಜೊತೆ ಉಚಿತ ಸಮವಸ್ತ್ರಗಳನ್ನು ಇಂದು ವಿತರಿಸಲಾಗುತ್ತಿದೆ ಎಂದರು. ಇನ್ನು ಕೆಲವೇ ದಿನಗಳಲ್ಲಿ ಇನ್ನೊಂದು ಜೊತೆ ಸಮವಸ್ತ್ರಗಳನ್ನು ವಿತರಣೆ ಮಾಡಲಾಗುವುದು ಎಂದ ಅವರು ಶಾಲೆ ಅರಂಭಕ್ಕೂ ಮುನ್ನ ಪಠ್ಯಪುಸ್ತಕಗಳನ್ನು ಸಹಿತ ವಿತರಣೆ ಮಾಡಲಾಗುವುದು ಎಂದರು. ಮುಖ್ಯ ಶಿಕ್ಷಕ ಬಿ.ಎಸ್.ಸದ್ಯೋಜಾತಪ್ಪ, ಚಂದ್ರಶೇರ್, ಉಮೇಶ್, ಯಶೋಧಾ, ಗೋಪಾಲ್, ಎಸ್.ರಾಮಪ್ಪ, ಮಲ್ಲಿಕಾರ್ಜುನ, ರಮೇಶ್ ಸೇರಿದಂತೆ ಇತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 