ಯರಗುಡಿ ಶಾಲೆ ರಕ್ಷಿಸಲು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ
Students, parents protest to save Yaragudi school
ಬಳ್ಳಾರಿ 28: ತಾಲೂಕಿನ ಹೊಸ ಯರಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಕ್ಷಿಸಲು ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಶಾಲೆಯ ಹತ್ತಿರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಉಪಾಧ್ಯಕ್ಷರಾದ ಶಾಂತಿಯವರು ಮಾತನಾಡಿ ಹೊಸ ಯರಗುಡಿ ಸರ್ಕಾರಿ ಪ್ರಾಥಮಿಕ ಶಾಲೆ ಬಡವರಿಗೆ ಇರುವುದು ಇದು ಒಂದೇ ಸರ್ಕಾರಿ ಶಾಲೆ.
ಈ ಶಾಲೆಯನ್ನು ಮುಚ್ಚಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಹೋಗಬೇಕೆಂದರೆ 5 ವರ್ಷದ ಮಕ್ಕಳು ಒಂದು ಕಿಲೋ ಮೀಟರ್‌ದೂರ ಹೇಗೆ ಹೋಗಬೇಕು? ಜೊತೆಗೆ ಅಲ್ಲಿನ ಜನರು ಶಾಲೆಯ ಕಟ್ಟಡ ಸರಿ ಇಲ್ಲದಿದ್ದಾಗ ಊರಿನ ಜನರೆಲ್ಲರೂ ಸೇರಿ ಶಾಲೆಯರಸ್ತೆ ಸರಿ ಮಾಡಬೇಕೆಂದು ಹೋರಾಟ ಮಾಡಿದರು ಹಾಗೆಯೇ ಇಲ್ಲಿ 8ನೇ ತರಗತಿ ವರೆಗೂ ಶಾಲೆ ಸಹ ಮಾಡಬೇಕೆಂದು ಬೇಡಿಕೆ ಸಹ ಇಟ್ಟರು. ಹಾಗೆಯೇ ಇಲ್ಲಿ ವಾಸಿಸುವ ಜನರೆಲ್ಲರೂ ದುಡಿಯುವ ರೈತರು, ಕಾರ್ಮಿಕರು. ಬಡವರ ಮಕ್ಕಳು 150ಕ್ಕೂ ಹೆಚ್ಚು ಅಧಿಕ ಸಂಖ್ಯೆಯಲ್ಲಿ ದಾಖಲಾತಿ ಇರುವ ಸರ್ಕಾರಿ ಶಾಲೆ ಮುಚ್ಚಬಾರದು ಎಂಬುದು ಪೋಷಕರು ಆಗ್ರಹವಾಗಿದೆ.
ಈ ಪ್ರತಿಭಟನೆಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ,ಎಐಡಿಎಸ್‌ಓ ಸದಸ್ಯರಾದ ಕಾಂತೇಶ್, ತಿಪ್ಪೇಸ್ವಾಮಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ನಾಗಮ್ಮ ಹಾಗೂ ಊರಿನ ಸರ್ಕಾರಿ ಶಾಲೆ ಉಳಿಸುವ ಸಮಿತಿ ಅಧ್ಯಕ್ಷರು ಪಾರ್ವತಿ ಕಾರ್ಯದರ್ಶಿ ಅಂಬಣ್ಣ, ಸದಸ್ಯರಾದ ಶೇಖರ್, ಪೋತಪ್ಪ, ಲಕ್ಷ್ಮಮ್ಮ,ಹಾಗೂ ಹಿರಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 