ವಿದ್ಯಾರ್ಥಿಗಳೇ ದೇಶದ ಭವಿಷ್ಯದ ಸಂಪತ್ತು: ಶಾಸಕ ಡಾ. ಚಂದ್ರು ಲಮಾಣಿ
Students are the nation's future wealth: MLA Dr. Chandru Lamani
ಲಕ್ಷ್ಮೇಶ್ವರ 19: ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಸಂಪತ್ತು. ಆದ್ದರಿಂದ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಚೆನ್ನಮ್ಮನ ವನಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರು, ಕನಕ ನೌಕರರ ಸಂಘದ ತಾಲೂಕು ಘಟಕ ಹಾಗೂ ಲಕ್ಷ್ಮೇಶ್ವರ ತಾಲೂಕು ಹಾಲುಮತ ಸಮಾಜದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಮತ್ತು ಸಾಧಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಬೆಳೆಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮನಸೂರು ಧಾರವಾಡ ರೇಣುಕಾಸಿದ್ಧೇಶ್ವರ ಮಹಾಮಠದ ಪರಮಪೂಜ್ಯ ಡಾ. ಬಸವರಾಜ ದೇವರು ಹಾಗೂ ಹುಲೂರು ಅಮೋಘಮಠದ ಪರಮಪೂಜ್ಯ ಸಿದ್ದಯ್ಯ ಷಣ್ಮುಖಯ್ಯ ವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಕಾಲೇಜಿನ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಬಸವರಾಜ ಗುರಿಕಾರ, ಚಂದ್ರಶೇಖರ ನುಗ್ಜಿ ಸೇರಿದಂತೆ ಸಮಾಜದ ಮುಖಂಡರು, ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 