ಕಾಲೇಜ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಬಿಡುವಂತೆ ವಿದ್ಯಾರ್ಥಿಗಳ ಒತ್ತಾಯ
Students demand separate buses for college students
ಲಕ್ಷ್ಮೇಶ್ವರ" 23 : ಸಾರಿಗೆ ಘಟಕದಿಂದ ಪ್ರತಿದಿನ ಕಾಲೇಜ್ ಸಮಯಕ್ಕೆ ಸರಿಯಾಗಿ ಪ್ರತ್ಯೇಕ ಬಸ್ ಬಿಡುವಂತೆ ಶಿಗ್ಲಿ ರಸ್ತೆಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳು ಸಾರಿಗೆ ಘಟಕದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ ಕಾಲೇಜ್ ಸಮಯಕ್ಕೆ ಸರಿಯಾಗಿ ಪ್ರತ್ಯೇಕ ಬಸ್ ಬಿಡುವಂತೆ ಮಾತನಾಡಿದ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ 9:30ಕ್ಕೆ ಹಾಗೂ ಮಧ್ಯಾಹ್ನ ಕಾಲೇಜ್ ಬಿಡುವ ಸಮಯಕ್ಕೆ ಪ್ರತ್ಯೇಕ ಬಸ್ ಬಿಡಬೇಕು ಹಾಗೂ ಕಾಲೇಜ್ ಮುಂದೆ ಹಾದು ಹೋಗುವ ಎಲ್ಲಾ ಬಸ್ ಗಳು ನಿಲ್ಗಡೆಯಾಗಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾರಿಗೆ ಘಟಕದ ಅಧಿಕಾರಿಗಳನ್ನು ಒತ್ತಾಯಿಸಿದರು ಪ್ರತಿದಿನ ಕಾಲೇಜು ಸಮಯಕ್ಕೆ ಬಸ್ ಗಾಗಿ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಬೆಳಗ್ಗೆ 9:45ಕ್ಕೆ ಲಕ್ಷ್ಮೇಶ್ವರ ಬಸ್ ನಿಲ್ದಾಣದಿಂದ ಗುತ್ತಲ ಮಾರ್ಗವಾಗಿ ಬಸ್ ಹೋಗುತ್ತದೆ.
ಆ ಬಸ್ ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಾರೆ ಅಂತದರಲ್ಲಿ ವಿದ್ಯಾರ್ಥಿಗಳು ನಿಂತುಕೊಂಡು ಹೋಗಲು ಸಹ ಜಾಗ ಇರುವುದಿಲ್ಲ ಅಂತದರಲ್ಲಿಯೇ ವಿದ್ಯಾರ್ಥಿಗಳು ಜೋತು ಬಿದ್ದುಕೊಂಡು ಕಾಲೇಜಿಗೆ ಹೋಗುವಂತಾಗಿದೆ ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರು ಅನಾಹುತ ಕಟ್ಟಿಟ್ಟ ಬುತ್ತಿ ಅದಕ್ಕಾಗಿ ಸಾರಿಗೆ ಘಟಕದ ಅಧಿಕಾರಿಗಳು ಕಾಲೇಜ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಬಿಡಬೇಕು ಹಾಗೂ ಕಾಲೇಜ್ ಮುಂದೆ ಹಾದು ಹೋಗುವ ಪ್ರತಿಯೊಂದು ಬಸ್ ನಿಲುಗಡೆ ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ ಬಾಕ್ಸ್ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುತ್ತಿದೆ ಅದರ ಜೊತೆಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ತರಳವ್ವ ಸಮಯಕ್ಕೆ ಸರಿಯಾಗಿ ಪ್ರತ್ಯೇಕ ಬಸ್ ಬಿಡುವ ವ್ಯವಸ್ಥೆ ಮಾಡಬೇಕು ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತುಂಬಾ ಅನುಕೂಲಕರ ವಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆಯನ್ನು ನೀಡಿದಂತಹಾಗುತ್ತದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 