ಇಂಡಿ

ಲಚ್ಯಾಣ ಸರ್ಕಾರಿ ಪದವಿಪೂರ್ವ ಕಾಲೇಜು ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ಲಚ್ಯಾಣ ಸರ್ಕಾರಿ ಪದವಿಪೂರ್ವ ಕಾಲೇಜು ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ಲೋಕದರ್ಶನ ವರದಿ  

            ಇಂಡಿ 18 : ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಂಡಿ ತಾಲ್ಲೂಕಿನ ಲಚ್ಯಾಣ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳು ಎದುರಾಳಿ ತಂಡಗಳ ವಿರುದ್ಧ ಉತ್ತಮ ಆಟ ಪ್ರದರ್ಶಿಸಿ, ತಂಡದ ಒಗ್ಗಟ್ಟು, ಶಿಸ್ತು, ಕ್ರೀಡಾ ಕೌಶಲ್ಯ ಹಾಗೂ ಪರಿಶ್ರಮದ ಮೂಲಕ ಜಯ ಸಾಧಿಸಿದ್ದಾರೆ.

            ಈ ಸಾಧನೆಯಿಂದ ಕಾಲೇಜಿಗೆ ಹೆಮ್ಮೆಯ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಜಿಲ್ಲೆಯಲ್ಲಿ ಗಮನ ಸೆಳೆದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಜಿ.ಎಸ್‌. ಡೊಮನಾಳ ಅವರು ನಿರಂತರ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಿದ್ದು, ಉಪನ್ಯಾಸಕರ ಸಹಕಾರ ಮತ್ತು ಉತ್ತೇಜನ ವಿದ್ಯಾರ್ಥಿಗಳ ಯಶಸ್ಸಿಗೆ ಪ್ರಮುಖ ಪ್ರೇರಣೆಯಾಗಿದೆ. ಅದೇ ರೀತಿ ಕಾಲೇಜಿನ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

              ರಾಜ್ಯಮಟ್ಟದ ಪಂದ್ಯಾವಳಿಯಲ್ಲಿಯೂ ವಿದ್ಯಾರ್ಥಿಗಳು ಇದೇ ಉತ್ಸಾಹ, ಆತ್ಮವಿಶ್ವಾಸ ಹಾಗೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿದ್ದಾರೆ ವಿದ್ಯಾರ್ಥಿಗಳ ಈ ಸಾಧನೆಯು ಕಾಲೇಜಿನ ಕ್ರೀಡಾ ಚಟುವಟಿಕೆಗಳಿಗೆ ದೊರೆಯುತ್ತಿರುವ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸಾಕ್ಷಿಯಾಗಿದ್ದು, ಇತರ ವಿದ್ಯಾರ್ಥಿಗಳಿಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆಯಾಗಿದೆ. 


ಸುದ್ದಿ ಓದಿ