ಬೆಳಗಾವಿ

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮೆರೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ನಿಡೋಣಿ ಶಾಲೆಯ ವಿದ್ಯಾರ್ಥಿನಿಯರು

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮೆರೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ನಿಡೋಣಿ ಶಾಲೆಯ ವಿದ್ಯಾರ್ಥಿನಿಯರು
Students from Nidoni School have been selected for the state level after excelling at the district-l

ನಿಡೋಣಿ  29 : ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.  

ಶಾಲೆಯ ವಿದ್ಯಾರ್ಥಿನಿ ರೂಪಾ ಬಸವರಾಜ ಮಮದಾಪುರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ ಸುಶ್ಮಿತಾ ಟಕ್ಕಳಕಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.   

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಮುಖ್ಯಗುರುಗಳಾದ ಟಿ.ಎಸ್‌. ಪೂಜಾರಿ, ಹಿರಿಯ ಶಿಕ್ಷಕರಾದ ಎಸ್‌.ಬಿ. ಕೋಟ್ಯಾಳ, ಡಿ.ಡಿ. ಅಂಕಲಗಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಿ.ಡಿ. ಪಾಟೀಲ, ರೇಷ್ಮಾ ಬೆವನೂರ  

ನಿವೇದಿತಾ ಕನ್ನೊಳ್ಳಿ, ಶೋಭಾ ಇಮ್ರಾಪುರ ಹಾಗೂ ಶಾಲೆಯ ಎಲ್ಲ ಶಿಕ್ಷಕರು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು,

ಸದಸ್ಯರು ಹಾಗೂ ಗ್ರಾಮದ ಸಮಸ್ತ ನಾಗರಿಕರು ವಿದ್ಯಾರ್ಥಿನಿಯರ ಸಾಧನೆಯನ್ನು ಶ್ಲಾಘಿಸಿ, ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಮತ್ತು ನಿಡೋಣಿ ಗ್ರಾಮಕ್ಕೆ ಇನ್ನಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ. 


ಸುದ್ದಿ ಓದಿ