ಹಜಾರೆ ಫೌಂಡೇಶದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ರಬಕವಿ-ಬನಹಟ್ಟಿ : ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಹಜಾರೆ ಫೌಂಡೇಶನ್ದ ಪದ್ಮಾವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ, ಹೊಸೂರಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುರಸ್ಕಾರ 2023, ಕೆಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. 

ಮುಖ್ಯ ಅತಿಥಿಗಳಾಗಿ ನಿವೃತ್ತ ಅರ್ಥಶಾಸ್ತ್ರ ಉಪನ್ಯಾಸಕ ಎಮ್.ಎಸ್. ಬಾದಾಮಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು

ಸಂಸ್ಥೆಯ ಕಾರ್ಯಾಧ್ಯಕ್ಷ ಸತೀಶ ಹಜಾರೆ, ಆಡಳಿತಾಧಿಕಾರಿ  ಭಾರತಿ ತಾಳಿಕೋಟಿ ಹಾಗೂ ಪ್ರಾಚಾರ್ಯ ಶ್ರೀಶೈಲ ಕುಂಬಾರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಸತೀಶ ಬೆಳಗಲಿ, ವೇದಿಕೆ ಮೇಲಿದ್ದರು. ಶಿಕ್ಷಣ ಸಂಸ್ಥೆಯ ಎಲ್ಲ ವಿದ್ಯಾರ್ಥಿ ಗಳು ಹಾಗೂ ಬೋಧಕ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು