ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಟಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು: ಎಸ್‌ಎಫ್‌ಐ
Students must come forward to fight against anti-student policies: SFI
ಬ್ಯಾಡಗಿ, ಜು.15: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಆತಂಕ ಮತ್ತು ಆತ್ಮಹತ್ಯೆಗಳಂತಹ ಘಟನೆಗಳು ಆತಂಕಕಾರಿ. ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ವಿದ್ಯಾರ್ಥಿಗಳು ಸಂಘಟಿತ ಹೋರಾಟ ನಡೆಸಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಹೇಳಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್‌ಎಫ್‌ಐ ಬ್ಯಾಡಗಿ ವಿದ್ಯಾರ್ಥಿಗಳ 4ನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಮತ್ತು ಯುವಜನರು ರಾಜಕೀಯ ಅರಿವು ಬೆಳೆಸಿಕೊಳ್ಳಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಸಮರ್ಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಜಗಾಪೂರ ಮಾತನಾಡಿ, ಎಸ್‌ಎಫ್‌ಐ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳು ಮತ್ತು ಅನ್ಯಾಯಗಳ ವಿರುದ್ಧ ಹೋರಾಡುವ ಸಂಘಟನೆಯಾಗಿದೆ. ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚುವ ಬದಲು ಅವುಗಳಿಗೆ ಅಗತ್ಯ ಅನುದಾನ ನೀಡಬೇಕು. ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಬೇಕು ಎಂದು ಆಗ್ರಹಿಸಿದರು.
ಸಮ್ಮೇಳನದ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಿಂದ ಬಸ್ ನಿಲ್ದಾಣ ಮಾರ್ಗವಾಗಿ ಮುಖ್ಯರಸ್ತೆಯಲ್ಲಿ ವಿದ್ಯಾರ್ಥಿಗಳು ಬೃಹತ್ ಮೆರವಣಿಗೆ ನಡೆಸಿ, ವಿವಿಧ ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ನಾಗವತ್, ರಘು ಅಂಗಡಿ, ಚೈತ್ರಾ ಕೊರವರ, ಸುಗಂಧ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರ್ಷಾ ಪಾಟೀಲ್, ಪಂಚಾಕ್ಷರಿ ಕೋಟಿಹಾಳ, ಶಿಲ್ಪಾ ಪಾಟೀಲ್, ನಿಖಿಲ್ ಎನ್., ರೇಣುಕಾ, ಸಹನಾ, ಕನ್ಯಾವ್ವ, ಹಿಮಾಶ್ರೀ, ಚೈತ್ರಾ ಹಾಗೂ ನೂರಾರು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ 