ಪ್ರಾಚ್ಯ ಪ್ರಜ್ಞೆ ಅರಿವು ವಿದ್ಯಾರ್ಥಿಗಳಿಗೆ ಅಗತ್ಯ
Students need an awareness of their ancient heritage
ಹೂವಿನಹಡಗಲಿ, ಸೆ.16: ವಿದ್ಯಾರ್ಥಿಗಳು ಪ್ರಾಚ್ಯ ಪ್ರಜ್ಞೆ ಹಾಗೂ ಐತಿಹಾಸಿಕ ಪರಂಪರೆಗಳ ಕುರಿತು ಅರಿವು ಬೆಳೆಸಿಕೊಳ್ಳುವುದು ಅಗತ್ಯ ಎಂದು ತಾಲೂಕು ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಹಣ್ಣಿ ನರೇಶ್ ಅಭಿಪ್ರಾಯಪಟ್ಟರು.
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ತಾಲೂಕು ಪ್ರೌಢಶಾಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಅರಿವು ಕಾರ್ಯಕ್ರಮವು ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಐತಿಹಾಸಿಕ ಹಾಗೂ ಪಾರಂಪರಿಕ ತಾಣಗಳ ಕುರಿತು ಮಾಹಿತಿ ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಜಿಪಿಜಿ ಉಪಪ್ರಾಂಶುಪಾಲ ಕೋಟೆಪ್ಪ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಮುದ್ದಿ ಕಸ್ತೂರಿ, ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ, ಎಸ್. ಗಂಗಾಧರ, ಉದಯ ಶಂಕರ್, ಆನಂದ್ ಜಿ. ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರಬಂಧ, ರಸಪ್ರಶ್ನೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 