ವಿಜಯನಗರ

ವಿದ್ಯಾರ್ಥಿಗಳಿಗೆ ಸಂವಿಧಾನ, ಸಂಸದೀಯ ಬಗ್ಗೆ ಅರಿವು ಅಗತ್ಯ: ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ

ವಿದ್ಯಾರ್ಥಿಗಳಿಗೆ ಸಂವಿಧಾನ, ಸಂಸದೀಯ ಬಗ್ಗೆ ಅರಿವು ಅಗತ್ಯ: ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ
Students need an understanding of the Constitution and parliamentary affairs: Deputy Commissioner Ka


              ವಿಜಯನಗರ (ಹೊಸಪೇಟೆ) ನ.13: ವಿದ್ಯಾರ್ಥಿಗಳಿಗೆ ಓದು, ಶಿಕ್ಷಣ ಮಾತ್ರ ಮುಖ್ಯವಲ್ಲ; ಭಾರತದ ಸಂವಿಧಾನ ಮತ್ತು ಸಂಸದೀಯ ವ್ಯವಸ್ಥೆಯ ಬಗ್ಗೆ ಅರಿವು ಹೊಂದುವುದು ಮುಖ್ಯವಾಗಿದೆ. ಭವ್ಯ ಭಾರತದ ನಿರ್ಮಾತೃಗಳಾದ ಯುವ ಸಮೂಹ ದೇಶದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಜ್ಞಾನ ಹೊಂದುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರು ಹೇಳಿದರು.  

             ಅವರು ಇಂದು ಬೆಳಿಗ್ಗೆ ಹೊಸಪೇಟೆ ನಗರದ ಜಿಲ್ಲಾ ಒಳಕ್ರಿಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾರಕ್ಷತ ಇಲಾಖೆ, ಉನ್ನತ ಶಿಕ್ಷಣ ಇಲಾಖೆಗಳು ಸಂಯುಕ್ತವಾಗಿ ಅಂತರಾಷಿೊಥಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಜಿಲ್ಲಾ ಮಟ್ಟದ ಯುವ ಸಂಸತ್ತು-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  

              ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಅಣಕು ಯುವ ಸಂಸತ್ತು ಕಾರ್ಯಕ್ರಮವು ಸಹಾಯವಾಗುತ್ತದೆ. ಭಾರತದ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮ ರಾಜಕೀಯ ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಕಾಣುತ್ತೇವೆ.

             ಯುವ ಸಮೂಹ ವಿದ್ಯಾರ್ಥಿ ಹಂತದಲ್ಲಿಯೇ ಸಕ್ರಿಯವಾಗಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಭವಿಷ್ಯದಲ್ಲಿ ಉತ್ತಮ ನಾಯಕತ್ವ ರೂಪುಗೊಳ್ಳಲು ಸಹಾಯವಾಗುತ್ತದೆ ಎಂದು ಅವರು ಹೇಳಿದರು.  

            ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದರ ಜೊತೆಗೆ ದೇಶ ಕಟ್ಟುವ ದೊಡ್ಡ ಜವಬ್ದಾರಿ ಇದೆ. ಪ್ರತಿಯೊಬ್ಬ ವಿದ್ಯಾರ್ಥಿಯು ನಮ್ಮ ಸಂವಿಧಾನ ನೀಡಿರುವ ಅವಕಾಶಗಳನ್ನು ಬಳಸಿಕೊಂಡು ಜವಬ್ದಾರಿಯುತ ಉತ್ತಮ ನಾಗರೀಕರಾಗಿ ಬೆಳೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.  

         ಪ್ರಜಾಪ್ರಭುತ್ವದ ಯಶಸ್ಸು ಕೇವಲ ಚುನಾವಣೆ ಅಥವಾ ಸರ್ಕಾರದ ಆಡಳಿತಕ್ಕೆ ಸೀಮಿತವಾಗಿಲ್ಲ. ಜನರ ಅಭಿಪ್ರಾಯಗಳಿಗೆ ಗೌರವ ನೀಡುವುದು, ಭಿನ್ನಮತಗಳನ್ನು ಪ್ರಜಾಸತ್ತಾತ್ಮಕವಾಗಿ ಚರ್ಚಿಸುವುದು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡುವುದು ಪ್ರಜಾಪ್ರಭುತ್ವದ ನಿಜವಾದ ಆಶಯವಾಗಿದೆ. ಈ ಮೌಲ್ಯಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.  


ಸುದ್ದಿ ಓದಿ